ಬೆಂಗಳೂರು: ಕೊರೊನಾ ವೈರಸ್‌ಗೆ (Corona Virus) ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (Chief Minister B.S. Yediyurappa) ಅವರನ್ನು ಪ್ರಶ್ನೆ ಮಾಡಿದ್ದಾರೆ‌.


COMMERCIAL BREAK
SCROLL TO CONTINUE READING

ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಕೊರೋನಾ ವೈರಸ್ ನಿಯಂತ್ರಣ ಮಾಡುವಲ್ಲಿನ ವೈಫಲ್ಯವನ್ನು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ(Siddaramaiah) , ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ  ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ -HD Kumaraswamy: 'ರಮೇಶ್ CD ಮಾಹಿತಿ ಕೊಟ್ಟಿದ್ದು ನಾನು; ಮಹಾನಾಯಕ ಯಾರೆಂದು ಗೊತ್ತು'


ಇನ್ನೊಂದು ಟ್ವೀಟ್ ನಲ್ಲಿ 'ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. @CMofKarnataka ಅವರೇ, ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ?' ಎಂದು ಪ್ರಶ್ನಿಸಿದ್ದಾರೆ.


ಮತ್ತೊಂದು ಟ್ವೀಟ್ ನಲ್ಲಿ 'ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ @CMofKarnataka ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ  ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಕೇಳಿದ್ದಾರೆ‌.


ಇದನ್ನೂ ಓದಿ - Ramesh Jarkiho: ಸಚಿವ ಸ್ಥಾನ ಕಳೆದುಕೊಂಡ 'ಸಾಹುಕಾರ್'ಗೆ ಬಿಜೆಪಿಯಿಂದ ಮತ್ತೊಂದು ಶಾಕ್!


ಮಗದೊಂದು ಟ್ವೀಟ್ ನಲ್ಲಿ 'ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ @CMofKarnataka, ಮಾಡಿರುವ ಖರ್ಚಿನ ವಿವರ ಮಾತ್ರ  ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ @CMofKarnataka ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ  ಕೊರೊನಾ (Coronavirus) ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಕೇಳಿದ್ದಾರೆ‌.


ಇದನ್ನೂ ಓದಿ - Covid 2nd wave ನಿಯಂತ್ರಿಸಲು ಪೂರ್ವಸಿದ್ಧತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್


ಮಗದೊಂದು ಟ್ವೀಟ್ ನಲ್ಲಿ 'ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ @CMofKarnataka, ಮಾಡಿರುವ ಖರ್ಚಿನ ವಿವರ ಮಾತ್ರ  ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.