CM Siddaramaiah: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.


COMMERCIAL BREAK
SCROLL TO CONTINUE READING

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು ಎಂದು ಕೇಳಿದರು.


ಇದನ್ನೂ ಓದಿ: “ಅಶ್ವಿನ್ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದ್ದಾನೆ”- ಇಂಗ್ಲೆಂಡ್ ಮಾಜಿ ಆಟಗಾರ ಆರೋಪ


ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿಎಂ ಸಿದ್ದರಾಮಯ್ಯ ಜನಸ್ತೋಮದ ಎದುರು ಪ್ರಶ್ನಿಸಿದರು.


ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.‌


ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ?  ಹೇಳಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮುಖ್ಯಮಂತ್ರಿಗಳು ಕೇಳಿದರು. ಜನರು ಇಲ್ಲ, ಇಲ್ಲ, ಏನಿಲ್ಲ ಎಂದು ಕೂಗಿದರು.


2013-18 ರ ವರೆಗೂ ನಾವು ಕೊಟ್ಟ ಭರವಸೆಗಳಲ್ಲಿ ಶೇ98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆ. ನಾವು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದೆವು.


ನಮ್ಮ ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದ 155 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದರು. ಬಿಜೆಪಿ ತನ್ನ ಇತಿಹಾಸದಲ್ಲಾಗಲೀ, ವರ್ತಮಾನದಲ್ಲಾಗಲೀ ಇಷ್ಟೊಂದು ಜನೋಪಯೋಗಿ ಕೆಲಸ ಮಾಡಿದ್ದರೆ ಒಂದೇ ಒಂದು ಉದಾಹರಣೆ ಕೊಡಿ ಎಂದು ಮುಖ್ಯಮಂತ್ರಿಗಳು ಜನರಿಗೆ ಕೇಳಿದರು. ಜನರು ಇಲ್ಲಾ ಇಲ್ಲಾ ಏನಿಲ್ಲ, ಯಾವುದೂ ಇಲ್ಲ ಎಂದು ಕೂಗಿದರು.


ಅದೇ ರೀತಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಲ್ಲೂ ಕೋಟಿ ಕೋಟಿ ಮಹಿಳೆಯರು ಗ್ಯಾರಂಟಿಗಳ ಲಾಭವನ್ನು ಪ್ರತೀ ತಿಂಗಳು ಪಡೆಯುತ್ತಿದ್ದಾರೆ. ನಿಮಗೆಲ್ಲಾ ಈ ಯೋಜನೆಯ ಅನುಕೂಲ ಸಿಗುತ್ತಿದೆಯಾ ಎಂದು ಮುಖ್ಯಮಂತ್ರಿಗಳು ಕೇಳಿದ್ದಕ್ಕೆ ಸಿಗುತ್ತಿದೆ , ಸಿಗುತ್ತಿದೆ ಎಂದು ಕೂಗಿ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ ಜಯಕಾರ ಹಾಕಿದರು.


ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.


ಇದನ್ನೂ ಓದಿ:  ಅನುಷ್ಕಾಗೂ ಮೊದಲು ಈ ನಟಿಯರ ಜೊತೆ ಡೇಟಿಂಗ್ ಮಾಡಿದ್ರು ಕೊಹ್ಲಿ! ಅದ್ರಲ್ಲಿ ಒಬ್ಬಳು ಕನ್ನಡದ ಹೆಸರಾಂತ ನಟಿ


ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ "ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ" ಎಂದು ಭಜನೆ ಆರಂಭಿಸಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್