ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
“ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ.ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಎಂದು ಉಪ ಮುಖ್ಯಮಂತ್ರಿ ಡಿಕೆ ಶಿ ಹೇಳಿದ್ದಾರೆ.
ಬೆಂಗಳೂರು :ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು.ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಉತ್ತರಿಸಿದ ಡಿಕೆಶಿ, “ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ.ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು.ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ.ಒಂದಷ್ಟು ಜನ ಸೋತಿದ್ದಾರೆ.ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ, ಬೆಳೆಯುತ್ತಾರೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ : ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
“ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರೂ ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು.ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.
ಮುಡಾ ಹಗರಣದ ವಿರುದ್ದ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಕೇಳಿದಾಗ “ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ.ಅವರು ಮಾಡಿರುವ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ.ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕು ಅದನ್ನು ಕೊಡುತ್ತೇವೆ”ಎಂದು ಖಾರವಾಗಿ ಉತ್ತರಿಸಿದರು.
ಇದನ್ನೂ ಓದಿ : ಸಿಎಂ - ಡಿಸಿಎಂ ವಿರುದ್ಧ ಹರಿಹಾಯ್ದ ಗುತ್ತಿಗೆದಾರರು - ಹಣ ಬಿಡುಗಡೆಗೆ ೧೫ ದಿನಗಳ ಗಡುವು, ಹೋರಾಟದ ಎಚ್ಚರಿಕೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.