ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ.
ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ಬಿರುಕು, ಭಿನ್ನಾಭಿಪ್ರಾಯವಿಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿರುವ ಅವರು, ಪಕ್ಷದಲ್ಲಿ ಒಡಕು ಇದೆ ಎನ್ನುವ ಮಾತುಗಳು ಸತ್ಯಕ್ಕೆ ದೂರ ಅಂತಾ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಮತ್ತು ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಜೊತೆಯಾಗಿಯೇ ಇದ್ದೇವೆ. ಜೊತೆ ಜೊತೆಯಾಗಿಯೇ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಒಡಕು ಮತ್ತು ಭಿನ್ನಾಭಿಪ್ರಾಯವಿಲ್ಲ. ನಾವೀಗ ಪ್ರತಿಪಕ್ಷದಲ್ಲಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದು ಹೇಳಿದರು.
Karnataka High Court: ಪೋಷಕರ ಸಂಬಂಧ ಅಕ್ರಮವಾಗಿರಬಹುದು ಆದರೆ ಅವರಿಂದ ಹುಟ್ಟಿದ ಮಗು ಅಲ್ಲ: ರಾಜ್ಯ ಹೈಕೋರ್ಟ್
ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ನಮ್ಮ ಪಕ್ಷ ಹೋರಾಟ ನಡೆಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ನೇತೃತ್ವದ ಸರ್ಕಾರದ ಬಗ್ಗೆ ರಾಜ್ಯದ ಜನರು ಬೇಸತ್ತಿದ್ದಾರೆ. ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ಯಾವುದೇ ಸಮಯದಲ್ಲಿ ಕಾಂಗ್ರೆಸ್(Congress) ಪಕ್ಷ ಚುನಾವಣೆ ಎದುರಿಸಲು ಸಿದ್ಧವಿದೆ. ಒಂದು ವೇಳೆ ಈಗಲೇ ಚುನಾವಣೆ ನಡೆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧವೆಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರ ತರುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಈ ವಿಷಯವಾಗಿ ಚರ್ಚಿಸಲು ಇಂದು ಸಂಜೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ.
KRS ಗೋಡೆ ಕುಸಿತದ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತುವೆ: ಸುಮಲತಾ ಅಂಬರೀಶ್
ವರುಣಾ ಕ್ಷೇತ್ರದಲ್ಲಿ ಸೋಲಿನ ಬಳಿಕ ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದ ಸಿದ್ದರಾಮಯ್ಯ(Siddaramaiah) ಬಳಿಕ ಮತ್ತೆ ಸ್ಪರ್ಧಿಸುವುದಾಗಿ ಹೇಳಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆಂದು ಶಾಸಕ ಜಮೀರ್ ಅಹ್ಮದ್ ಈ ಹಿಂದೆ ಹೇಳಿಕೆ ನೀಡಿದ್ದರು. ಇದಕ್ಕೆ ಕಿಡಿಕಾರಿದ್ದ ಡಿಕೆಶಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ಸದ್ಯ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕೆಂದು ಹೇಳಿದ್ದರು. ಹೀಗಾಗಿ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.