ಗಣಪತಿ ಮೆರವಣಿಗೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಇವು... ತಿಳಿದಿದ್ದರೆ ಬೀಳಲ್ಲ ದಂಡ!

Ganapati procession guidelines: ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

Written by - Chetana Devarmani | Last Updated : Sep 4, 2024, 12:08 PM IST
  • ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
  • ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.
  • ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.ಅ
ಗಣಪತಿ ಮೆರವಣಿಗೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಇವು... ತಿಳಿದಿದ್ದರೆ ಬೀಳಲ್ಲ ದಂಡ! title=

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.  

ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ. 

ಇದನ್ನೂ ಓದಿ: ಬಿಬಿಎಂಪಿ ವಲಯದಲ್ಲಿ ʼನಂಬಿಕೆ ನಕ್ಷೆʼ ಯೋಜನೆಗೆ ಚಾಲನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸುರಕ್ಷತಾ  ಕ್ರಮಗಳು:

* ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. 
* ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
* ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.
* ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.
* ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.
•ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. 
* ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

ತಾತ್ಕಲಿಕ ಸಂಪರ್ಕದ ಮಾಹಿತಿ:

* ತಾತ್ಕಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು. 
* ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ. 
* ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.
* ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

ಇದನ್ನೂ ಓದಿ: ಕಾಂಗ್ರೆಸ್ ನಿಂದ ಅಪರೇಷನ್: ಸ್ವ ಪಕ್ಷದ ಸದಸ್ಯನ ಮನೆ ಮುಂದೆ ಬಿಜೆಪಿ ಪ್ರೊಟೆಸ್ಟ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News