ಪರಿಸ್ಥಿತಿ ಕೈಮೀರಿ ಹೋದಾಗ ಲಾಕ್ ಡೌನ್ ಬಗ್ಗೆ ಚಿಂತನೆ: ಗೃಹಸಚಿವ ಆರಗ ಜ್ಞಾನೇಂದ್ರ
ಇಂದಿನ ಸಭೆಯಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಯಾಗಿಲ್ಲ. ಪರಿಸ್ಥಿತಿ ನಮ್ಮ ಕೈಮೀರಿ ಹೋದಾಗ ಅದರ ಚರ್ಚಿಸಲಾಗುತ್ತದೆ. ಅಲ್ಲಿವರೆಗೂ ಯಾವುದೇ ರೀತಿ ಭಯ ಬೇಡವೆಂದು ಗೃಹಸಚಿವರು ತಿಳಿಸಿದ್ದಾರೆ.
ಬೆಂಗಳೂರು: ಪರಿಸ್ಥಿತಿ ನಮ್ಮ ಕೈಮೀರಿ ಹೋದಾಗ ಲಾಕ್ ಡೌನ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ ನಡೆದ ರಾಜ್ಯದ ಕೋವಿಡ್-19 ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಇಂದಿನ ಸಭೆಯಲ್ಲಿ ಲಾಕ್ ಡೌನ್(Karnataka Lockdown) ಮಾಡುವ ಬಗ್ಗೆ ಚರ್ಚೆಯಾಗಿಲ್ಲ. ಪರಿಸ್ಥಿತಿ ನಮ್ಮ ಕೈಮೀರಿ ಹೋದಾಗ ಅದರ ಚರ್ಚಿಸಲಾಗುತ್ತದೆ. ಅಲ್ಲಿವರೆಗೂ ಯಾವುದೇ ರೀತಿ ಭಯ ಬೇಡ. ರಾಜ್ಯದಲ್ಲಿ ಹಾಲಿ ಮಾರ್ಗಸೂಚಿಗಳು ಯಥಾಸ್ಥಿತಿ ಮುಂದುವರಿಯಲಿವೆ. ಇವತ್ತಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಆಧಾರದ ಮೇಲೆ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಶಾಲೆ, ಕಾಲೇಜುಗಳ ನಿಯಮಗಳು ಯಥಾಸ್ಥಿತಿ ಮುಂದುವರಿಯಲಿವೆ. ಮಾರುಕಟ್ಟೆಗಳ ವಿಕೇಂದ್ರೀಕರಣ ನಾಳೆಯಿಂದ ಆರಂಭವಾಗಲಿವೆ ಎಂದು ಹೇಳಿದರು.
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಪ್ರಧಾನಿ ಕರೆ: ಆರೋಗ್ಯದ ಜೊತೆಗೆ ರಾಜ್ಯದ ಕೋವಿಡ್ ಪರಿಸ್ಥಿತಿ ವಿಚಾರಿಸಿದ ಪಿಎಂ ಮೋದಿ
ವೀಕೆಂಡ್ ಕರ್ಫ್ಯೂ ಕುರಿತು ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಜನವರಿ 1ರಂದು ನಡೆಯಲಿರುವ ಪ್ರಧಾನಿ ಮೋದಿ(Narendra Modi)ಯವರ ಸಭೆ ಬಳಿಕ ಇದರ ಚರ್ಚೆ ನಡೆಸಲಾಗುವುದು. ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಸೋಂಕು ಬಂದರೆ ಡಿಸಿಗಳು ನಿರ್ಧಾರ ತೆಗೆದುಕೊಳ್ಳಬೇಕು. ನಿರ್ದಿಷ್ಟ ಶಾಲಾ-ಕಾಲೇಜುಗಳು ಬಂದ್ ಮಾಡಬೇಕಾ? ಬೇರೆ ಕ್ರಮ ತಗೋಬೇಕಾ ಅಂತಾ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಬೇಕು. ಕೊರೊನಾ(COVID-19) ಮತ್ತು ಒಮಿಕ್ರಾನ್ ರೂಪಾಂತರಿ ವೈರಸ್ ವಿಚಾರದಲ್ಲಿ ಜನರು ಪ್ಯಾನಿಕ್ ಆಗಬಾರದು. ನಾಳೆಯೇ ಬಂದ್ ಆಗಿಬಿಡುತ್ತೆ ಅನ್ನೋ ಭಯ ಇರಬಾರದು. ಇದನ್ನು ಜನರಿಗೆ ಮನವರಿಕೆ ಮಾಡಿಕೊಡಲು ಸಿಎಂ ಸೂಚಿಸಿದ್ದಾರೆ ಅಂತಾ ಸಚಿವರು ಹೇಳಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಗಂಡಸ್ತನ ಇರೋದು ಬಿಜೆಪಿಗೆ ಮಾತ್ರ: ಅಶ್ವತ್ಥ ನಾರಾಯಣ
Home isolationನಲ್ಲಿರಲು ಸಿಎಂ ನಿರ್ಧಾರ
ಇನ್ನು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಆರೋಗ್ಯ ವಿಚಾರವಾಗಿ ಯಾವುದೇ ಆತಂಕ ಇಲ್ಲದಿರುವ ಕಾರಣ ಮನೆಯಲ್ಲೇ ಚಿಕಿತ್ಸೆಗೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಕೋವಿಡ್ ನಿಂದ ಗುಣಮುಖ ಆಗುವವರೆಗೆ ಮನೆಯಲ್ಲೇ Home isolationನಲ್ಲಿ ಇರಲು ಸಿಎಂ ನಿರ್ಧಾರ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.