ಬೆಂಗಳೂರು: ಹನ್ನೆರಡನೇ ಶತಮಾನದಲ್ಲಿ ನಡೆದ ಸಮಾಜೋ-ಧಾರ್ಮಿಕ ಆಂದೋಲನದ ಸ್ಮರಣೆಯಾಗಿ ಬಸವ ಕಲ್ಯಾಣದಲ್ಲಿ ಉಳಿದುಕೊಂಡಿರುವ ಶರಣರ ಕೇಂದ್ರಗಳ ಜೀರ್ಣೋದ್ಧಾರ ಕಾರ್ಯ ನಡೆದಿದೆ. ಎಲ್ಲ ಆಂದೋಲನಗಳಿಗೆ ಕೇಂದ್ರ ಬಿಂದುವಾಗಿದ್ದ ಅನುಭವ ಮಂಟಪದ ಮರು ನಿರ್ಮಾಣಕ್ಕೂ ಇದೀಗ ಸರ್ಕಾರ ಮುಂದಾಗಿದೆ. 


COMMERCIAL BREAK
SCROLL TO CONTINUE READING

ಅನುಭವ ಮಂಟಪದ ಮರು ನಿರ್ಮಾಣದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಮಾಡಿದ್ದ ಡಾ. ಗೊ.ರು. ಚನ್ನಬಸಪ್ಪ ನೇತೃತ್ವದ ತಜ್ಞರ ಸಲಹಾ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ತನ್ನ ವರದಿಯನ್ನು ಸಲ್ಲಿಸಿತು. 


ವರದಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಅನುಭವ ಮಂಟಪದ ಮರು ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. 


ತಜ್ಞರ ಸಮಿತಿ ರಚಿಸುವ ನಿರ್ಣಯವನ್ನು ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು. 


ಈಗ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ಪರಿಶೀಲಿಸಿ, ಮಂಡಳಿ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.