`ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯವಿಲ್ಲ`
ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯವಿಲ್ಲ. ಇಂದು ಯಾವ ರೀತಿ ನಾಟಕವಾಡುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ಸರ್ಕಾರ 40% ಸರ್ಕಾರ ಎಂದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದರು.
ಕುಮಟಾ: ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯವಿಲ್ಲ. ಇಂದು ಯಾವ ರೀತಿ ನಾಟಕವಾಡುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ಸರ್ಕಾರ 40% ಸರ್ಕಾರ ಎಂದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದರು. ಇದರ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಬೆಳಗಾವಿ ಗುತ್ತಿಗೆದಾರ ಸಚಿವರ ಕಮಿಷನ್ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ. ಹುಬ್ಬಳ್ಳಿಯ ಗುತ್ತಿಗೆದಾರ ಈಗ ದಯಾಮರಣಕ್ಕೆ ಪತ್ರ ಬರೆದಿದ್ದಾರೆ. ಇವು ಕೆಲವು ಉದಾಹರಣೆಗಳು ಮಾತ್ರ ಬೆಳಕಿಗೆ ಬಂದಿವೆ ಎಂದು ಕುಮಟಾದಲ್ಲಿ ನಡೆದ ಕಾಂಗ್ರೆಸ್ ಜನಜಾಗೃತಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಇದು ಕೇವಲ ಪರೇಶ್ ಮೇಸ್ತಾ ಅವರ ವಿಚಾರಕ್ಕೆ ಮಾತ್ರ ಮಾಡುತ್ತಿರುವ ಸಮಾವೇಶವಲ್ಲ. ಇದು ಜನಜಾಗೃತಿ ಸಮಾವೇಶ. ಈ ಸಮಾವೇಶಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ನಿಮ್ಮೆಲ್ಲರಿಗೂ ಕೋಟಿ ನಮಸ್ಕಾರಗಳು.
ಸರ್ವಜ್ಞ ಅವರು ಒಂದು ಮಾತು ಹೇಳಿದ್ದಾರೆ. ಹುಳಿಗಳಲ್ಲಿ ನಿಂಬೆ ಹುಳಿ ಶ್ರೇಷ್ಠ, ಕಪ್ಪು ಬಣ್ಮದಲ್ಲಿ ದುಂಬಿಯ ಕಪ್ಪು ಬಣ್ಣ ಶ್ರೇಷ್ಠ, ದೇವತೆಗಳಲ್ಲಿ ಶಿವನಿಗಿಂತ ಶ್ರೇಷ್ಠ ಮತ್ತೊಬ್ಬರಿಲ್ಲ. ಅದೇ ರೀತಿ ನಂಬಿಕೆಗಿಂತ ದೊಡ್ಡ ಗುಣ ಬೇರೊಂದಿಲ್ಲ ಎಂದು. ನಾನು ಕೂಡ ಉತ್ತರ ಕನ್ನಡ ಜಿಲ್ಲೆಯ ಜನ ನಮಗೆ ಶಕ್ತಿ ನೀಡುತ್ತೀರಿ ಎಂದು ನಂಬಿದ್ದೇನೆ. ಇಡೀ ಜಿಲ್ಲೆ ನರಳುತ್ತಿದೆ. ನೋವಿನಿಂದ ನಿಮ್ಮ ಬದುಕಲ್ಲಿ ಬದಲಾವಣೆಗೆ ಕಾಯುತ್ತಿದ್ದೀರಿ.
ಇದನ್ನೂ ಓದಿ : Trending Video : ಸೊಂಡಿಲಿನಿಂದ ಡ್ರಮ್ ನುಡಿಸುವ ಆನೆ.. ವಿಡಿಯೋ ವೈರಲ್
ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಕೇಂದ್ರದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರದಲ್ಲಿದೆ. ಅವರು ಆಗಾಗ್ಗೆ ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಾರೆ. ಆದರೆ ಇವರು ಕೊಟ್ಟ ಮಾತಿನಂತೆ ನಡೆದಿದ್ದಾರಾ? ಇದು ಬಸವಣ್ಣನ ಕರ್ನಾಟಕ ಇದು, ಕುವೆಂಪು, ಕನಕದಾಸರು, ಸಂತ ಶಿಶುನಾಳ ಶರೀಫರ ಕರ್ನಾಟಕ. ಈ ಕರ್ನಾಟಕ ಎಲ್ಲಿ ಹೋಯಿತು? ದ್ವೇ, ಅಸೂಯೆ, ಶಾಂತಿ ಭಂಗದ ಪರಿಣಾಮ ನಾವುಗಳು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ.
ಕರಾವಳಿ ಭಾಗಕ್ಕೆ ಯಾರೂ ವ್ಯಾಪಾರ ವಹಿವಾಟು ಮಾಡದ ಪರಿಣಾಮ ಇಲ್ಲಿನ ಯುವಕರು ಉದ್ಯೋಗ ಅರಸಿ ಬೇರೆ ರಾಜ್ಯ, ದೇಶಗಳಿಗೆ ಹೋಗುತ್ತಿದ್ದಾರೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಗದ ಕಾರಣ ಎಲ್ಲ ವಲಸೆ ಹೋಗಬೇಕಾಗಿದೆ. ಮೋದಿ ಅವರು ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದರು, ನಿಮ್ಮ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು. ಯಾವುದೂ ಆಗಲಿಲ್ಲ.
ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಮಾಡುತ್ತಿರುವಾಗ ನೀವೆಲ್ಲರೂ ಬಂದು ಬೆಂಬಲ ನೀಡಿದ್ದಿರಿ. ಆ ಮೂಲಕ ನೀವು ಇಡೀ ದೇಶಕ್ಕೆ ಶಕ್ತಿ ತುಂಬಿದ್ದೀರಿ. ನಿಮ್ಮ ಹೆಜ್ಜೆ ಇತಿಹಾಸದ ಪುಟ ಸೇರಿದೆ. ಆ ಮೂಲಕ ನಿಮ್ಮ ಜೀವನದಲ್ಲಿ ಒಂದು ಮರೆಯಲಾದ ನೆನಪು ಮಾಡಿಕೊಂಡಿದ್ದೀರಿ.
ನಾನು ಕೂಡ 400ಕ್ಕೂ ಹೆಚ್ಚು ಕಿ.ಮೀ ದೂರ ಪಾದಯಾತ್ರೆ ಮಾಡಿದ್ದೇನೆ. ಮೊಳ ಕಾಲ್ಮೂರು ಬಳಿ ಹಿರಿಯ ಮಹಿಳೆ ರಾಹುಲ್ ಗಾಂಧಿ ಅವರಿಗೆ ಸೌತೇಕಾಯಿ ಕೊಟ್ಟು, ಇದು ನಿಮ್ಮ ಅಜ್ಜಿ ಇಂದಿರಾ ಗಾಂಧಿ ಅವರು ಕೊಟ್ಟ ಜಮೀನಿನಲ್ಲಿ ಬೆಳೆದ ಸೌತೇಕಾಯಿ ಎಂದು ಸ್ಮರಿಸಿದರು. ಆ ಹೆಣ್ಣು ಮಗಳು ಆ ಮೂಲಕ ಹೃದಯ ಶ್ರೀಮಂತಿಕೆ ಮೆರೆದರು. ಆಗ ರಾಹುಲ್ ಗಾಂಧಿ ಅವರು ಸಂತುಷ್ಟರಾದರು.
ಇದನ್ನೂ ಓದಿ: Virat Kohli: ಈ ಸ್ಟಾರ್ ಆಟಗಾರನಿಂದ ವಿರಾಟ್ ಕೊಹ್ಲಿಗೆ ಬೆದರಿಕೆ!
ರಾಹುಲ್ ಗಾಂಧಿ ಅವರಿಗೆ ಮಾಧ್ಯಮ ಮಿತ್ರರೊಬ್ಬರನ್ನು ಪರಿಚಯಿಸಿದಾಗ ಅವರು ರಾಹುಲ್ ಅವರನ್ನು ನೀವು ಪ್ರಧಾನಮಂತ್ರಿ, ಮಂತ್ರಿ, ಪಕ್ಷದ ಅಧ್ಯಕ್ಷ ಸ್ಥಾನವನ್ನು ತ್ಯಾಗ ಮಾಡಿ ಯಾಕೆ ಇಷ್ಟು ದೊಡ್ಡ ಪಾದಯಾತ್ರೆ ಮಾಡುತ್ತಿದ್ದೀರಿ? ಯಾರಿಗಾಗಿ ಮಾಡುತ್ತಿದ್ದೀರಿ ಎಂದು ಕೇಳಿದರು. ಅದಕ್ಕೆ ರಾಹುಲ್ ಗಾಂಧಿ ಅವರು ಉತ್ತರಿಸಿ, ‘ನಿಮ್ಮ ಮನೆಯಲ್ಲಿ ಯಾರಾದರೂ ಹುಟ್ಟಿದರೆ ಎಷ್ಟು ಜನ ಸಂತೋಷ ಪಡುತ್ತೀರಿ. ಸತ್ತರೆ ಎಷ್ಟು ಜನ ದುಃಖ ಪಡುತ್ತೀರಿ. ಆದರೆ ನಮ್ಮ ಕುಟುಂಬದಲ್ಲಿ ಹಾಗಲ್ಲ. ನಮ್ಮ ಕುಟುಂಬಕ್ಕೆ ಜನ ಪ್ರೀತಿ ಮತ್ತು ಅಧಿಕಾರ ನೀಡಿದ್ದಾರೆ. ನಮ್ಮ ಕುಟುಂಬದಲ್ಲಿ ಇಬ್ಬರು ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಗಾಗಿ ಪ್ರಾಣ ಬಲಿ ಕೊಟ್ಟಿದ್ದಾರೆ. ಜನ ನಮ್ಮ ಕುಟುಂಬಕ್ಕೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ಅವರಿಗೆ ನೀಡಲು ನನ್ನ ಬಳಿ ಏನೂ ಇಲ್ಲ. ಆದೇ ಜನ ಇಂದು ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆಯಿಂದ ನರಳುತ್ತಿದ್ದಾರೆ. ಧರ್ಮ ದ್ವೇಷದಿಂದ ಇಬ್ಬಾಗವಾಗಿದ್ದಾರೆ. ಆದಾಯ ಕುಸಿಯುತ್ತಿದೆ. ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಿಂದ ಜನರನ್ನು ರಕ್ಷಿಸಿ ಶಕ್ತಿ ತುಂಬಬೇಕು. ಜನರ ಪ್ರೀತಿಯ ಋಣ ತೀರಿಸಲು ಎಷ್ಟು ತ್ಯಾಗ ಮಾಡಿದರೂ ಸಾಧ್ಯವಿಲ್ಲ ಎಂದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.