ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ತಗ್ಗಿಸಲು ಈ ಗ್ಯಾರಂಟಿ ಯೋಜನೆ- ಡಿಸಿಎಂ ಡಿ ಕೆಶಿ

Reaction On Guarantees Implement: ಬಾಡಿಗೆ ಮನೆಯಲ್ಲಿರುವವರಿಗೆ ಗೃಹಜ್ಯೋತಿ ಯೋಜನೆ ಫಲಾನುಭವದ ಬಗ್ಗೆ ಕೇಳಿದ ಪ್ರಶ್ನೆಗೆ, "ಬಾಡಿಗೆ ಮನೆಯಲ್ಲಿರುವವರು ಬಡವರಲ್ಲವೇ. ಅವರಿಗೂ ಈ ಯೋಜನೆಯ ಫಲ ಸಿಗಬೇಕು.  ಜನರು ಬಾಡಿಗೆ ಮನೆಯಲ್ಲಾದರೂ ಇರಲಿ ಸ್ವಂತ ಮನೆಯಲ್ಲಿ ಈ ಯೋಜನೆಯ ಫಲ ಅವರಿಗೆ ಸಿಗಲಿದೆ.

Written by - Zee Kannada News Desk | Last Updated : Jun 3, 2023, 01:14 PM IST
ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ತಗ್ಗಿಸಲು ಈ ಗ್ಯಾರಂಟಿ ಯೋಜನೆ- ಡಿಸಿಎಂ ಡಿ ಕೆಶಿ title=

ಬೆಂಗಳೂರು: ಬಾಡಿಗೆ ಮನೆಯಲ್ಲಿರುವವರಿಗೆ ಗೃಹಜ್ಯೋತಿ ಯೋಜನೆ ಫಲಾನುಭವದ ಬಗ್ಗೆ ಕೇಳಿದ ಪ್ರಶ್ನೆಗೆ, "ಬಾಡಿಗೆ ಮನೆಯಲ್ಲಿರುವವರು ಬಡವರಲ್ಲವೇ. ಅವರಿಗೂ ಈ ಯೋಜನೆಯ ಫಲ ಸಿಗಬೇಕು.  ಜನರು ಬಾಡಿಗೆ ಮನೆಯಲ್ಲಾದರೂ ಇರಲಿ ಸ್ವಂತ ಮನೆಯಲ್ಲಿ ಈ ಯೋಜನೆಯ ಫಲ ಅವರಿಗೆ ಸಿಗಲಿದೆ. ನಮ್ಮ ಮಾತು 200 ಯೂನಿಟ್ ವರೆಗೂ ಉಚಿತ ಎಂದು ಹೇಳಿದ್ದೆವು ಅದರಂತೆ ನೀಡಿದ್ದೇವೆ. ಇಷ್ಟು ದಿನಗಳ ಕಾಲ ನೂರು ಯೂನಿಟ್ ಬಳಸುತ್ತಿದ್ದವರು. ಏಕಾಏಕಿ 200 ಯುನಿಟ್ ಬಳಸಿದರೆ ಅದಕ್ಕೆ ಅವಕಾಶವಿಲ್ಲ" ಎಂದು ತಿಳಿದರು.

ಯೋಜನೆಯ ಫಲ ತ್ಯಜಿಸಲು ಅವಕಾಶ ಕಲ್ಪಿಸುವಿರಾ ಎಂದು ಕೇಳಿದಾಗ, "ಖಂಡಿತವಾಗಿಯೂ ಇದಕ್ಕೆ ಅವಕಾಶ ಕಲ್ಪಿಸುತ್ತೇವೆ. ಒಂದು ವೇಳೆ ಯಾರಿಗಾದರೂ ಈ ಯೋಜನೆ ಫಲ ಬೇಡವಾದರೆ ಅದನ್ನು ಅವರು ತ್ಯಜಿಸಿ ವಿದ್ಯುತ್ ಬಿಲ್ ಕಟ್ಟಬಹುದು. ಅನೇಕ ಅಧಿಕಾರಿಗಳು, ಮಾಧ್ಯಮ ಮುಖ್ಯಸ್ಥರು, ಸರ್ಕಾರಿ ನೌಕರರು ಈ ಗೃಹಜೋತಿ ಯೋಜನೆಯ ಫಲ ಬೇಡ ಎಂದು ಪತ್ರ ಬರೆದರೆ, ಮತ್ತೆ ಕೆಲವರು ಖುದ್ದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟದ ಆನೆಗೆ 35 ಲಕ್ಷ ರೂ ವಿಮೆ

ಯಾರಿಗೆಲ್ಲ ಈ ಯೋಜನೆಯ ಲಾಭ ಬೇಡವೋ ಅವರಿಗೆ ಇದನ್ನು ತ್ಯಜಿಸಲು ಅವಕಾಶ ನೀಡಲಾಗುವುದು. ಅದಕ್ಕಾಗಿ ಈ ಯೋಜನೆಗಳ ಫಲ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಕೇಂದ್ರ ಸರ್ಕಾರ ಅಡುಗೆ ಅನಿಲ ಸಬ್ಸಿಡಿ ತ್ಯಜಿಸಲು ಕರೆ ಕೊಟ್ಟಾಗ ಅನೇಕರು ಅದಕ್ಕೆ ಸ್ಪಂದಿಸಿ ಸಬ್ಸಿಡಿಯನ್ನು ಕೈಬಿಟ್ಟಿದ್ದರು. ಅದೇ ರೀತಿ ಇಲ್ಲಿಯೂ ಯೋಜನೆ ಲಾಭ ತ್ಯಜಿಸಬಹುದು" ಎಂದು ತಿಳಿಸಿದರು.

ಕಾಂಗ್ರೆಸ್ನವರು ಹಣೆಗೆ ತುಪ್ಪ ಸವರುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಟೀಕೆ ಕುರಿತು ಕೇಳಿದಾಗ, "ಕುಮಾರಣ್ಣ ದೊಡ್ಡವರು ಅವರಿಗೆ ಬಹಳ ಅನುಭವವಿದೆ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ನನ್ನ ಕರ್ತವ್ಯ ಮಾಡುತ್ತೇನೆ ಅವರು ಅವರ ಕೆಲಸ ಮಾಡಲಿ" ಎಂದು ತಿಳಿಸಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಕಂಡು ಬಂದ ನೈತಿಕ ಪೋಲೀಸಗಿರಿ

ಒಡಿಸ್ಸಾ ರೈಲು ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ

230 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿರುವ ಒಡಿಸ್ಸಾ ರೈಲು ದುರಂತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

ಬಾಲಾ ಸೊರ್ ನಲ್ಲಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News