ಬೆಂಗಳೂರು:  ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು  ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


COMMERCIAL BREAK
SCROLL TO CONTINUE READING

ಇದನ್ನು ಓದಿ: Arrogant Zodiac People: ಈ ರಾಶಿಯವರು ಯಾರೊಂದಿಗೂ ನೇರವಾಗಿ ಮಾತನಾಡುವುದಿಲ್ಲ!


ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. "ಕಾವೇರಿ ನದಿ ಮೇಲ್ವಿಚಾರಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ.  ಕಾವೇರಿ ವಿಷಯದ ಮೇಲೆ ತಮಿಳುನಾಡು ಈ ರೀತಿ ಹಲವಾರು ವರ್ಷಗಳಿಂದ  ಮಾಡಿದ್ದಾರೆ. ಇದು ಅದರ  ಭಾಗವಷ್ಟೇ. ಇದು ಕಾನೂನಿನ ಚೌಕಟ್ಟಿನಲ್ಲಿ ನಿಲ್ಲುವುದೂ ಇಲ್ಲ. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಖಂಡಿತವಾಗಿಯೂ ಪರಿಗಣಿಸುವುದಿಲ್ಲ. ನ್ಯಾಯ ಸಿಗುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.  


ಇದನ್ನು ಓದಿ: ಸ್ನೇಹಿತ ಸಿಗರೇಟ್ ಕೊಟ್ಟ ಸೇದಿದ್ದೆ, ಡ್ರಗ್ಸ್ ಸೇವಿಸಿಲ್ಲ: ಸಿದ್ದಾಂತ್ ಕಪೂರ್


ಜೂನ್ 16 ರಂದು ತಮಿಳುನಾಡು, ಪಾಂಡಿಚೇರಿ, ಕರ್ನಾಟಕ ಹಾಗೂ ಕೇರಳ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು  ಸಭೆಯಲ್ಲಿ ಭಾಗವಹಿಸುತ್ತಾರೆ ಎಂದರು. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.