DK Shivakumar : ನೊಣವಿನಕೆರೆ ಅಜ್ಜಯ್ಯನ ಮಠದತ್ತ ಡಿಕೆಶಿ ಪ್ರಯಾಣ; ಕೆಟ್ಟು ನಿಂತ ಎಸ್ಕಾಟ್ ವಾಹನ
DK Shivakumar Visited Ajjaiah`s Math : ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೆ ಮೊದಲ ಬಾರಿಗೆ ಡಿಕೆ ಶಿವಕುಮಾರ್ ನೊಣವಿನಕೆರೆ ಅಜ್ಜಯ್ಯನ ಮಠದತ್ತ ಪ್ರಯಾಣ ಬೆಳೆಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೆ ಮೊದಲ ಬಾರಿಗೆ ಡಿಕೆ ಶಿವಕುಮಾರ್ ನೊಣವಿನಕೆರೆ ಅಜ್ಜಯ್ಯನ ಮಠದತ್ತ ಪ್ರಯಾಣ ಬೆಳೆಸಿದ್ದಾರೆ.
ರಾಜ್ಯದಲ್ಲಿ 135 ಸ್ಥಾನ ಗಳಿಸಿ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭ ಕನಕಪುರದಿಂದ 1.2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೂತನವಾಗಿ ರಚನೆಯಾಗುವ ಸರ್ಕಾರದಲ್ಲಿ ಸಿಎಂ ಆಗುವ ಪ್ರಯತ್ನ ನಡೆಸಿದ್ದರು. ಇವರಿಗೆ ಸವಾಲಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರಾದಾಗ ಸಂಕಷ್ಟ ಪರಿಹಾರಕ್ಕಾಗಿ ಎರಡು ಬಾರಿ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ: Rajiv Gandhi Death Anniversary: ರಾಜೀವ್ ಗಾಂಧಿ ಪುಣ್ಯಸ್ಮರಣೆ, ಗೌರವ ಸಲ್ಲಿಸಿದ ಸಿಎಂ & ಡಿಸಿಎಂ
ದಿಲ್ಲಿ ಮಟ್ಟದಲ್ಲಿ ಸಿಎಂ ಸ್ಥಾನಕ್ಕೆ ಲಾಭಿ ನಡೆದ ಸಂದರ್ಭ ಸಹ ಡಿಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಭೇಟಿ ನೀಡುವುದನ್ನು ಮರೆತಿರಲಿಲ್ಲ. ಚುನಾವಣೆಗೂ ಮುನ್ನ ಬಿ ಫಾರಂ ವಿತರಿಸುವಾಗಲೇ ಅಜ್ಜಯನ ಫೋಟೋ ಮುಂದೆ ಬಿ-ಫಾರಂಗಳನ್ನು ಇಟ್ಟು ಪೂಜಿಸಿ ವಿತರಣೆ ಆರಂಭಿಸಿದ ಡಿಕೆಶಿ ಪ್ರತಿ ಕೆಲಸಕ್ಕೂ ಅಜ್ಜಯ್ಯನ ಆಶೀರ್ವಾದ ಪಡೆಯುವುದನ್ನು ಮರೆಯುತ್ತಿಲ್ಲ. ನಿನ್ನೆ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿಯೂ ಡಿಕೆ ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿಯೇ ಪ್ರಮಾಣ ಮಾಡಿ ಅಧಿಕಾರ ವಹಿಸಿಕೊಂಡಿದ್ದರು.
ನೂತನವಾಗಿ ರಚನೆಯಾಗಿರುವ ಸರ್ಕಾರದಲ್ಲಿ ಅಧಿಕಾರ ಪಡೆದಿರುವ ಡಿಕೆ ಶಿವಕುಮಾರ್ ಅದನ್ನು ಅಧಿಕೃತವಾಗಿ ವಹಿಸಿಕೊಳ್ಳುವ ಮುನ್ನ ಮತ್ತೊಮ್ಮೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಲು ತೆರಳಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಧ್ಯಾಹ್ನ ತುಮಕೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಇದನ್ನೂ ಓದಿ: Boy Killed Crocodile: ನೀರು ತರಲು ಹೋದ ಬಾಲಕನ ಮೇಲೆ ಮೊಸಳೆ ದಾಳಿ -ಮೃತದೇಹಕ್ಕಾಗಿ ಹುಡುಕಾಟ!
ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ ಡಿಕೆ ಶಿವಕುಮಾರ್ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ತೆರಳಿದ್ದಾರೆ.
ನಡು ರಸ್ತೆಯಲ್ಲಿಯೇ ಕೆಟ್ಟು ನಿಂತ ಡಿಸಿಎಂ ಡಿಕೆ ಶಿವಕುಮಾರ್ ಎಸ್ಕಾರ್ಟ್ ವಾಹನ ಕೆಲ ಕಾಲ ಆತಂಕ ಸೃಷ್ಟಿಸಿತ್ತು. ಆದರೆ ಬದಲಿ ವ್ಯವಸ್ಥೆ ಆದ ಬಳಿಕ ಡಿಕೆ ಶಿವಕುಮಾರ್ ಹೆಚ್ ಎಲ್ ವಿಮಾನ ನಿಲ್ದಾಣದತ್ತ ಪ್ರಯಾಣ ಬೆಳೆಸಿದರು. ಕೆಪಿಸಿಸಿ ಕಚೇರಿ ಮುಂದೇನೆ ಕೆಟ್ಟು ನಿಂತಿರುವ ಡಿಕೆಶಿ ಬೆನ್ನುಗಾವಲು ವಾಹನ ಕೆಲಕಾಲ ಕಿರಿಕಿರಿ ಉಂಟು ಮಾಡಿತು. ಡಿಕೆ ಶಿವಕುಮಾರ್ ಕಾರಿನ ಮುಂದೆ ಇರಬೇಕಿದ್ದ ಎಸ್ಕಾರ್ಟ್ ವಾಹನ ಇಂಜಿನ್ ನಲ್ಲಿ ಸಮಸ್ಯೆ ಕಾಡಿದ್ದರಿಂದ ಕೊನೆಗೆ ಅದನ್ನು ಅಲ್ಲಿಯೇ ಬಿಟ್ಟು ಬೇರೆ ವಾಹನದೊಂದಿಗೆ ಭದ್ರತಾ ಸಿಬ್ಬಂದಿ ತೆರಳಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ