ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ :ಕೃತ್ಯ ಎಸಗಿದವರನ್ನು ಬಿಡುವುದಿಲ್ಲ ಆರೋಪಿಗಳು ಯಾರೇ ಆಗಿದ್ದರೂ ಕ್ರಮ : ಜಿ.ಪರಮೇಶ್ವರ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿಗಳು ಯಾರೇ ಆಗಿದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. 

Written by - Ranjitha R K | Last Updated : May 2, 2025, 12:04 PM IST
  • ಜಿ.ಪರಮೇಶ್ವರ್ ಅವರು ಹೇಳಿದ-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ
  • ಪೊಲೀಸ್ ಇಲಾಖೆ ನಿಮ್ಮ ಜೊತೆಗಿದೆ
  • ಶಾಂತಿ ಕಾಪಾಡಲು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ
ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ :ಕೃತ್ಯ ಎಸಗಿದವರನ್ನು ಬಿಡುವುದಿಲ್ಲ ಆರೋಪಿಗಳು ಯಾರೇ ಆಗಿದ್ದರೂ ಕ್ರಮ : ಜಿ.ಪರಮೇಶ್ವರ್

ಬೆಂಗಳೂರು : ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು. ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಕೃತ್ಯ ಎಸಗಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದರು. 

Add Zee News as a Preferred Source

ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.ಇದನ್ನು ಹೀಗೆಯೇ  ಮುಂದುವರಿಯಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಇನ್ನು ಮುಂದೆಯೂ ಇಂತಹ ಘಟನೆ ಆಗಲು ಬಿಡುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ : ಎಲ್ಲರಿಗೂ ಅವರ ಜನಸಂಖ್ಯೆ ಆಧಾರದ ಮೇಲೆ ನ್ಯಾಯ ಸಿಗಬೇಕು

ಇದೆ ವೇಳೆ ಶಾಂತಿಯನ್ನು ಕಾಪಾಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ‌ ಮಾಡಿದ್ದಾರೆ. ಸರ್ಕಾರ ಮತ್ತು‌ ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ. ಶಾಂತಿ‌ ಕಾಪಾಡಲು ಎಲ್ಲಾ ರೀತಿಯ ಪ್ರಯತ್ನವನ್ನು ನಾವು ಮಾಡುತ್ತೇವೆ. ಈಗಾಗಲೇ‌ ಕಾನೂನು ಸುವ್ಯವಸ್ಥೆ ಎಡಿಜಿಪಿ ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ನಿನ್ನೆಯ ಘಟನೆಯ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ‌. ಇದನ್ನು ಹತ್ತಿಕ್ಕಲು ಎಲ್ಲ ರೀತಿಯ ಪ್ರಯತ್ನ, ಕ್ರಮ ಕೈಗೊಳ್ಳಲಾಗಿದೆ.ಯಾವುದೇ ಪಕ್ಷ, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. 

ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಈ ಜವಾಬ್ಧಾರಿಯಿಂದ ನಾವು ನುಣುಚಿಕೊಳ್ಳುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು‌ ಪ್ರಕಾರ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡಿದ್ದೇವೆ. ಎಂದು ಹೇಳಿದರು.

ಇದನ್ನೂ ಓದಿ : ರಾಜ್ಯದ ಜಾತಿ ಗಣತಿಗೆ ಇತಿಶ್ರೀ ಹಾಡಲಿ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಕಾರ್ಯಕರ್ತರಿಗೆ ಜೀವಭಯವಿದೆ, ಉಳಿಗಾಲವಿಲ್ಲ ಎಂದಿರುವ ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರ? ಹಿಂದುಗಳಿಲ್ಲವೇ? ನಾವೆಲ್ಲ ಹಿಂದುಗಳಲ್ಲವ? ನಾವು ಬೇರೆಯವರ? ಆ ರೀತಿ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಕೊಲೆಯಾಗಿದೆ ಆರೋಪಿಗಳನ್ನು ಹಿಡಿದು ಹಾಕುತ್ತೇವೆ. ಘಟನೆಗೆ ಬೇರೆಬೇರೆ ಬಣ್ಣಕಟ್ಟುವುದು ಬೇಡ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಕೇಂದ್ರ ಸರ್ಕಾರ ಜಾತಿಗಣತಿ ಸಮೀಕ್ಷೆ ನಡೆಸುವ ತೀರ್ಮಾನದ ಕುರಿತ‌ ಪ್ರತಿಕ್ರಿಯಿಸಿ, 1931ರಲ್ಲಿ ಜಾತಿ ಜನಗಣತಿ ನಡೆದಿದೆ. ಆದಾದ ಮೇಲೆ‌ ನಮ್ಮ‌ ಪೂರ್ವಜರು ಏನು ಯೋಚನೆ ಮಾಡಿದ್ದರೋ ಗೊತ್ತಿಲ್ಲ. ಜಾತಿ ಹೋಗಬೇಕು ಎಂಬ ಕಲ್ಪನೆಯಲ್ಲಿ ಜಾತಿಗಣತಿ ಮಾಡುವುದನ್ನು ಬಿಟ್ಟಿದ್ದರು ಎಂದು ಕಾಣುತ್ತದೆ. ಮತ್ತೆ ಜಾತಿಜನಗಣತಿಯನ್ನು ಕರ್ನಾಟಕದಲ್ಲಿ ಪ್ರಾರಂಭಿಸಿದೆವು. 

ಯಾರು ಹಿಂದೆ ಉಳಿದಿದ್ದಾರೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಬೇಕು ಎಂಬುದು ಜನಗಣತಿಯ ಉದ್ದೇಶವಾಗಿತ್ತು. ಟರ್ಮ್ಸ್ ಆಫ್ ರೆಫರೆನ್ಸ್ ಕೊಡುವಾಗ ಸಾಮಾಜಿಕ, ಶೈಕ್ಷಣಿಕ‌ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು. ಅದನ್ನು ಮಾಡುವಾಗ ಯಾವ ಸಮುದಾಯದವರು, ಎಷ್ಟು ಜನಸಂಖ್ಯೆ ಇದೆ ಎಂಬುದನ್ನು ತಿಳಿಯುವ ಅಗತ್ಯತೆಯಿಂದ ಜಾತಿಗಣತಿ ಮಾಡಲಾಗಿದೆ. ಈಗ ಇಡೀ ದೇಶದಲ್ಲಿ ಜಾತಿಗಣತಿ ಮಾಡುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಜಾತಿಜನಗಣತಿ ದೇಶದಾದ್ಯಂತ ನಡೆಯಬೇಕು ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಕರ್ನಾಟಕದ ಬಗ್ಗೆ ಮಾತನಾಡುವಾಗ ರಾಷ್ಟ್ರದಲ್ಲಿ ಆಗಬೇಕು ಎಂದು ಅನೇಕ‌ ಸಂದರ್ಭಗಳಲ್ಲಿ ಹೇಳಿದ್ದಾರೆ. ಜಾತಿಗಣತಿ ನಡೆಸುವ ಅಗತ್ಯತೆ ಇದೆ ಎಂಬುದು ಕೇಂದ್ರ ಸರ್ಕಾರಕ್ಕೆ ಅರ್ಥವಾಗಿದೆ ಎಂದು ಅಭಿಪ್ರಾಯಪಟ್ಟರು.

ಹಿಂದೆ ಮುಸ್ಲಿಮರು ಅವರ ಸ್ಥಿತಿಗತಿಗಳನ್ನು  ಅಧ್ಯಯನ ಮಾಡಬೇಕು ಎಂದು ರಾಜೇಂದ್ರ ಸಹಚಾರ್ ನೇತೃತ್ವದಲ್ಲಿ ನಿರ್ಧರಿಸಿದ್ದರು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು.‌ ಸಾಮಾಜಿಕ, ಶೈಕ್ಷಣಿಕ‌ ಮತ್ತು ಆರ್ಥಿಕ ಸ್ಥಿತಿಗಳನ್ನ ಅಧ್ಯಯನ ನಡೆಸಿ ಕಾರ್ಯಕ್ರಮಗಳನ್ನು ಕೊಡಬೇಕು ಎಂದು ಮಾಡಲಾಗಿತ್ತು. ಮುಂದಿನ ಆಯವ್ಯಯದಲ್ಲಿ ಜಾತಿಗಣತಿಯನ್ನು ಆಧಾರವಾಗಿಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ‌ ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News