ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ

 ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.  

Written by - Ranjitha R K | Last Updated : Dec 13, 2024, 12:21 PM IST
  • ಒಂದು ದೇಶ ಒಂದು ಚುನಾವಣೆ, ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ
  • ಈ ನಿರ್ಧಾರವನ್ನು ದೇಶದ ಪ್ರತಿಯೊಬ್ಬರೂ ಬೆಂಬಲಿಸಬೇಕು
  • ರಾಷ್ಟ್ರ ರಾಜಧಾನಿಯಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ
ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ title=

ನವದೆಹಲಿ : ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ. ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ :  ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ತು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಈ ದೇಶಕ್ಕೆ ಒಳ್ಳೆಯದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆಎಂದು ಬಸವರಾಜ್ ಬೊಮ್ಮಾಯಿ ಹೇಳಿದರು. 

ಈ ಬಗ್ಗೆ  ಎಲ್ಲರೂ ಚರ್ಚೆ ಮಾಡಬೇಕು. ದೇಶದ ಪ್ರತಿಯೊಬ್ಬರೂ ಈ ನಿರ್ಧಾರವನ್ನು ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು ಎಂದು ಬೊಮ್ಮಾಯಿ ಕರೆ ನೀಡಿದರು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News