`ಮಹದಾಯಿ, ಕೃಷ್ಣಾ, ಕಾವೇರಿ ನದಿ ವಿಚಾರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದರೂ ಇನ್ನೂ ಉತ್ತರ ಬಂದಿಲ್ಲ`
ಮಹದಾಯಿ,ಕೃಷ್ಣಾ, ಕಾವೇರಿ ನದಿ ವಿವಾದ ವಿಚಾರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದರೂ ಇನ್ನೂ ಉತ್ತರ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಧಾರವಾಡ: ಮಹದಾಯಿ,ಕೃಷ್ಣಾ, ಕಾವೇರಿ ನದಿ ವಿವಾದ ವಿಚಾರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದರೂ ಇನ್ನೂ ಉತ್ತರ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಸಿಎಂ ಸಿದ್ದರಾಮಯ್ಯ
ಇಂದು ಧಾರವಾಡದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ತೆರಳುವ ಮಾರ್ಗ ಮಧ್ಯೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡುತ್ತಾ ಹೇಳಿದರು. ಇದೇ ವೇಳೆ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಆದ್ಯತೆ ಮೇರೆಗೆ ಅವುಗಳನ್ನು ಬಗೆಹರಿಸಿಕೊಡುವುದಾಗಿ ತಿಳಿಸಿದರು.ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿತ್ತು, ಆದರೆ ಈ ವರೆಗೆ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲಎಂದು ಅವರು ಹೇಳಿದರು.
ಇದನ್ನೂ ಓದಿ: ಚುನಾವಣೆ ಮುಗಿದರೂ ನಾಯಕ ನಿಲ್ಲದೆ ಬಿಜೆಪಿ ಹತಾಶೆ ಸ್ಥಿತಿಗೆ ತಲುಪಿದೆ: ಎಂಬಿ ಪಾಟೀಲ್
ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಅನುಮತಿ ದೊರೆತಿಲ್ಲ.ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ.ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದಕ್ಕೂ ಯಾವುದೇ ಉತ್ತರ ಬಂದಿಲ್ಲ.ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.