ಹುಬ್ಬಳಿ: ಹಿಂಡಲಗ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಬೆದರಿಕೆ ಕರೆ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಪ್ರಕರಣದ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತಿದೆ. ಅದಕ್ಕಿಂತ ಮುಖ್ಯವಾಗಿ ಅವರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತದೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Shocking: ಯೂಟ್ಯೂಬ್ ನೋಡಿ ಆತ್ಮಹತ್ಯೆ ಮಾಡಿಕೊಂಡ 11 ವರ್ಷದ ಬಾಲಕಿ..!


ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಳು ದಿನಗಳ ಕಾಲ ಅದ್ಭುತವಾದ ಯುವಜನೋತ್ಸವ ಅರ್ಥಪೂರ್ಣವಾಗಿ ಜರುಗಿದೆ. ಇಂದು ಸಮಾರೋಪ ಸಮಾರಂಭ ನಡೆಯುತ್ತಿದೆ. ವಿವಿಧ ರಾಜ್ಯಗಳ ಕ್ರೀಡಾಪಟುಗಳು ಆಗಮಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಅರ್ಥಪೂರ್ಣವಾಗಿ ನಡೆಸಿಕೊಟ್ಟಿದ್ದಾರೆ ಎಂದರು.


ಇದನ್ನೂ ಓದಿ: “ಆತ್ಮ ಕಳ್ಳ ಎಂದರೆ ಆ ಕ್ಷಣಕ್ಕೆ ಆತಹತ್ಯೆ ಮಾಡಿಕೊಳ್ತೇನೆ”: ಗೃಹ ಸಚಿವ ಜ್ಞಾನೇಂದ್ರ


ಈ ಭಾಗದಲ್ಲಿ ಈ ರೀತಿಯ ಕಾರ್ಯಕ್ರಮಗಳಿಂದ ಯುವಕರಿಗೆ ಸಾಧನೆ ಮಾಡಲು ಸ್ಪೂರ್ತಿ ದೊರೆಯಲಿದೆ.  ನಮ್ಮ ರಾಜ್ಯದ ಯುವ ನೀತಿಯಲ್ಲಿ ಶಿಕ್ಷಣ, ಉದ್ಯೋಗ, ಕ್ರೀಡೆ ಹಾಗೂ ಸಂಸ್ಕೃತಿಗೆ ಮಹತ್ವ ನೀಡಲಾಗಿದೆ. ಯುವಕರಿಗೆ ಎಲ್ಲಾ ರಂಗಗಳಲ್ಲಿ ಅವಕಾಶ ನೀಡಲಾಗಿದೆ. ಈ ವರ್ಷ ಗ್ರಾಮೀಣ ಕ್ರೀಡೆಗಳನ್ನು ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಿದ್ದು, ಕಬಡ್ಡಿ, ಕುಸ್ತಿ, ಖೋ ಖೋ ಮುಂತಾದ ಗ್ರಾಮೀಣ ಸೊಗಡಿರುವ ಕ್ರೀಡೆಗಳನ್ನು ಪ್ರಥಮ ಬಾರಿಗೆ ರಾಜ್ಯದಲ್ಲಿ ಏರ್ಪಡಿಸಿ ಹೊಸ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡಲಾಗುತ್ತಿದೆ ಎಂದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.