Heavy Rain in Karnataka : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಕಳೆದ 2 ದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆ ಆರಂಭವಾಗಿದ್ದು

Last Updated : Jun 29, 2021, 10:00 AM IST
  • ಕರಾವಳಿ ಭಾಗದಲ್ಲಿ 3 ದಿನಗಳ ಕಾಲ 'ಯಲ್ಲೋ ಅಲರ್ಟ್' ಘೋಷಣೆ
  • ಕಳೆದ 2 ದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆ ಆರಂಭವಾಗಿದ್ದು
  • ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ
Heavy Rain in Karnataka : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ title=

ಬೆಂಗಳೂರು : ಇಂದಿನಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕರಾವಳಿ ಭಾಗದಲ್ಲಿ 3 ದಿನಗಳ ಕಾಲ 'ಯಲ್ಲೋ ಅಲರ್ಟ್' ಘೋಷಣೆ ಮಾಡಲಾಗಿದೆ.

ಕಳೆದ 2 ದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆ(Rain in Karnataka) ಆರಂಭವಾಗಿದ್ದು, ಹೀಗಾಗಿ ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ನೆರೆಯ ರಾಜ್ಯಗಳಲ್ಲೂ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ : K Sudhakar : ರಾಜ್ಯಕ್ಕೆ ಬರುವ ಮಹಾರಾಷ್ಟ್ರ-ಕೇರಳ ಪ್ರಯಾಣಿಕರಿಗೆ 'RTPCR' ರಿಪೋರ್ಟ್ ಕಡ್ಡಾಯ! 

ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಜುಲೈ 1ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ಮಾಹಿತಿ ನೀಡಿದೆ.

ಇದನ್ನೂ ಓದಿ : Ration Card E-KYC : ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ!

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ನಿನ್ನೆ ಹೆಚ್ಚಿನ ಮಳೆಯಾಗಿದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ ಎದುರಾಗಿದೆ. ವಿಜಯಪುರ, ಬಾಗಲಕೋಟೆ, ಬೀದರ್, ಹಾವೇರಿ, ಧಾರವಾಡ, ಬಳ್ಳಾರಿ, ಕೊಪ್ಪಳ, ಕಲಬುರಗಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆ(Heavy Rainfall)ಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : Heavy Rainfall : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿಯಲ್ಲಿ 'ಯಲ್ಲೋ ಅಲರ್ಟ್'​

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News