ರಾಜ್ಯದಲ್ಲಿ ಮತ್ತೆ ಮೂರು ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ..!

ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ

Last Updated : Nov 17, 2020, 05:59 PM IST
  • ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ
  • ನ.18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ ಹವಾಮಾನ ಇಲಾಖೆ
  • ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲೆಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ
ರಾಜ್ಯದಲ್ಲಿ ಮತ್ತೆ ಮೂರು ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ..! title=

ಬೆಂಗಳೂರು: ಕೆಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಮೂರು ದಿನಗಳವರೆಗೆ ಮುಂದುವರಿಯಲಿದೆ.

ಬಂಗಾಳಕೊಲ್ಲಿ(Bay of Bengal)ಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಹಂಪಿಯಲ್ಲಿ ತಲೆ ಎತ್ತಲಿದೆ 'ವಿಶ್ವದ ಅತೀ ಎತ್ತರದ ಹನುಮಂತ'ನ ಪ್ರತಿಮೆ!

ಬೆಂಗಳೂರು, ಬೆಂಗಳೂರು-ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಇದೆ 18ರಿಂದ ನ.19ರವರೆಗೆ ಹಾಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನ.18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ನಾಯಕರಿಗೆ 'ಬಿಗ್ ಶಾಕ್' ನೀಡಿದ ಹೈಕಮಾಂಡ್..!

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲೆಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.

ಡಿ.5ಕ್ಕೆ 'ಕರ್ನಾಟಕ ಬಂದ್'..!

Trending News