ಮಾರ್ಷಲ್ ಗಳು ಪಾಲಿಕೆ ಸದಸ್ಯರನ್ನು ಹೊತ್ತುಕೊಂಡು ಬರುತ್ತಿರುವ ವೇಳೆಯಲ್ಲಿ ಸದಸ್ಯೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸದಸ್ಯೆ ಅಸ್ವಸ್ಥಗೊಂಡಿದ್ದು, ಘಟನೆ ವಿರುದ್ಧ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
)
ಹುಬ್ಬಳ್ಳಿ: ಸಾಮಾನ್ಯ ಸಭೆಯ ವೇಳೆ ನಡೆದ ಗಲಾಟೆಯಲ್ಲಿ ಪಾಲಿಕೆಯ ಮೂವರು ಕಾಂಗ್ರೆಸ್ ಸದಸ್ಯರನ್ನ ಅಮಾನತು ಮಾಡಲಾಗಿದೆ. ಈ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಒಬ್ಬ ಸದಸ್ಯೆ ಅಸ್ವಸ್ಥಗೊಂಡಿರುವ ಘಟನೆಯೂ ನಡೆದಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆಯಲ್ಲಿ ಮಾರ್ಷಲ್ ಗಳು ಸದಸ್ಯರನ್ನು ಹೊರ ಹಾಕುತ್ತಿರುವ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಅಸ್ವಸ್ಥಗೊಂಡಿದ್ದಾರೆ. ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲ ಅವರನ್ನು ಮಾರ್ಷಲ್ ಗಳು ಹೊತ್ತುಕೊಂಡು ಬರುತ್ತಿರುವ ವೇಳೆಯಲ್ಲಿ ಕೆಳಗೆ ಬಿದ್ದಿರುವ ಸುವರ್ಣ ಕಲಕುಂಟ್ಲಅಸ್ವಸ್ಥಗೊಂಡಿದ್ದು, ಘಟನೆ ವಿರುದ್ಧ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪಾಲಿಕೆ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಅಲ್ಲದೇ ಅಸ್ವಸ್ಥಗೊಂಡಿದ್ದ ಪಾಲಿಕೆ ಸದ್ಯಸ್ಯೆಯನ್ನು ಸದನದಲ್ಲಿಯೇ ಆರೈಕೆ ಮಾಡಲು ಮುಂದಾಗಿದ್ದಾರೆ.
ಒಟ್ಟಿನಲ್ಲಿ ಪಾಲಿಕೆಯ ನೂತನ ಮೇಯರ್ ಉಪಮೇಯರ್ ಅವರ ಮೊದಲ ಸಾಮಾನ್ಯ ಸಭೆಯಲ್ಲಿ ಗಲಾಟೆ ನಡೆದು, ಬಹುದೊಡ್ಡ ಗೊಂದಲ ಉಂಟಾಗಿದೆ.
ಮತ್ತೊಂದೆಡೆ, ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ನೀಡಿರುವ ಅನುದಾನದ ಬಗ್ಗೆ ಕೇಳಿದರೆ ಕಾಂಗ್ರೆಸ್ ಸದಸ್ಯರನ್ನು ಹೊರಗೆ ಹಾಕಿ ಸಾಮಾನ್ಯ ಸಭೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಸದಸ್ಯರು ಸಾಮಾನ್ಯ ಸಭೆಯ ಸಭಾಭವನದ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ಹತ್ತು ಕೋಟಿ ಅನುದಾನ ಕೊಟ್ಟಿದೆ. ಈ ವಿಷಯವನ್ನು ವಿಷಯ ಪಟ್ಟಿಯಿಂದ ತೆಗೆದುಹಾಕಲಾಗಿದೆಎಂದು ಕಾಂಗ್ರೆಸ್ ಸದಸ್ಯರ ಸಭೆಯನ್ನು ತೊರೆದು ಪ್ರತಿಭಟನೆ ನಡೆಸಿದರು. ಪಾಲಿಕೆಯಲ್ಲಿ ಬಿಜೆಪಿಯು ಹಿಟ್ಲರ್ ಆಡಳಿತ ನಡೆಸುತ್ತಿದೆ. ಅವಳಿನಗರದ ಅಭಿವೃದ್ಧಿಗೆ ಸರ್ಕಾರ ಅನುದಾನ ಕೊಟ್ಟಿದ್ದರೂ ಕೂಡ ಬೇಕಾಬಿಟ್ಟಿಯಾಗಿ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.