ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದುರಂತಗಳ ಸರಣಿ ಮುಂದುವರೆದಿದೆ. ಇತ್ತೀಚೆಗಷ್ಟೇ ಒಂದೇ ಕುಟುಂಬದ ಐವರು ಆತ್ಮಹತ್ಯೆ(Bengaluru Family Suicide) ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಘಟನೆ ಮರುಕಳಿಸಿದೆ. ಒಂದೇ ಕುಟುಂಬದ ಮೂವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆ(Prakruti Layout)ಯ ಮನೆಯೊಂದರಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ತಾಯಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ(Suicide) ಮಾಡಿಕೊಂಡಿರುವುದು ಶುಕ್ರವಾರ(ಅ.1) ಬಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ವಸಂತಾ(40), ಯಶ್ವಂತ್(15), ನಿಶ್ಚಿತಾ(6) ಎಂದು ಗುರುತಿಸಲಾಗಿದೆ. ರೂಂ ಒಂದರಲ್ಲಿ  ತಾಯಿ ಮಗಳು ಒಂದೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಮತ್ತೊಂದು ಕಡೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ: ಕಾಂಗ್ರೆಸ್


ಕೊರೊನಾ ಸೋಂಕು ತಗುಲಿ ವರ್ಷದ ಹಿಂದೆಯಷ್ಟೇ ವಸಂತಾ ಅವರ ಪತಿ ಮೃತಪಟ್ಟಿದ್ದರು. ಪತಿ ಸಾವಿನ ಬಳಿಕ ಪತ್ನಿ ಮಾನಸಿಕವಾಗಿ ನೊಂದಿದ್ದರು. ಇದರಿಂದ ಹೊರಬಾರಲಾಗದೆ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಾದನಾಯಕನಹಳ್ಳಿ ಪೊಲೀಸರು(Madanayakanahalli Police Station)ಪರಿಶೀಲನೆ ನಡೆಸಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಮೂವರು ಕೆಲ ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮನೆಯಿಂದ ಹೊರಬಾರದ ಕಾರಣ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಮನೆಯ ಬಾಗಿಲು ಮುರಿದು ನೋಡಿದಾಗ ಮೂವರು ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ ಎಂದು ಹೇಳಲಾಗುತ್ತಿದೆ.


11ನೇ ಮಹಡಿಯಿಂದ ಬಿದ್ದು ಬಾಲಕ ಸಾವು


ಬೆಂಗಳೂರಿನ ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನಲ್ಲಿ 11ನೇ ಮಹಡಿಯಿಂದ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್‌ನ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ ವೇಳೆ 10 ವರ್ಷದ ಗಗನ್ ಎಂಬಾತ ಆಕಸ್ಮಿಕವಾಗಿ ಬಹುಮಹಡಿಯಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಟೆರೇಸ್ ಮೇಲೆ ಆಟವಾಡಲು ಹೋದ ಬಾಲಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರ್.ಆರ್.ನಗರ ಪೊಲೀಸ್ ಠಾಣೆ(RR Nagara Police Station)ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.   


ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕೊಲೆಗಡುಕರನ್ನು ಶಿಕ್ಷಿಸುವ ಬದಲು ರಕ್ಷಣೆ ನೀಡುತ್ತಿತ್ತು: ಬಿಜೆಪಿ ಆರೋಪ


ಐವರು ಆತ್ಮಹತ್ಯೆ ಪ್ರಕರಣ: ಮೂವರ ಬಂಧನ


ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದಲ್ಲಿ ಐವರ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಹಲ್ಲೆಗೆರೆ ಶಂಕರ್ ಮತ್ತವರ ಅಳಿಯಂದಿರಾದ ಪ್ರವೀಣ್ ಹಾಗೂ ಶ್ರೀಕಾಂತ್ ಎಂಬುವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಶರಣಾದವರ ಡೆತ್​ನೋಟ್​ನಲ್ಲಿ ತಂದೆ ಶಂಕರ್ ಹಾಗೂ ಅಳಿಯಂದಿರ ವಿರುದ್ಧ ಆರೋಪ ಮಾಡಲಾಗಿತ್ತು. ಹೀಗಾಗಿ ಹಲ್ಲೆಗೆರೆ ಶಂಕರ್, ಅವರ ಪುತ್ರಿ ಸಿಂಚನಾರ ಪತಿ ಪ್ರವೀಣ್, ಸಿಂಧುರಾಣಿ ಅವರ ಪತಿ ಶ್ರೀಕಾಂತ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.