ಬೆಂಗಳೂರು: ಕೆ.ಆರ್. ಮಾರುಕಟ್ಟೆ ಮಾದರಿಯಲ್ಲೇ ಮೈಸೂರು ರಸ್ತೆ, ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯ ಭಾಗದಲ್ಲಿ ಬೃಹತ್ ಮಾರುಕಟ್ಟೆ ನಿರ್ಮಾಣ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. 


COMMERCIAL BREAK
SCROLL TO CONTINUE READING

ಕೆ.ಆರ್. ಮಾರುಕಟ್ಟೆ ವಿವಿಧ ಭಾಗಗಳಿಗೆ ಭೇಟಿ‌ ನೀಡಿದ ಅವರು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆ.ಆರ್.‌ ಮಾರುಕಟ್ಟೆಯಲ್ಲಿ ಬಹಳಷ್ಟು ವ್ಯಾಪಾರಸ್ಥರು ಬಾಡಿಗೆ ನೀಡದೇ ನಡೆಸುತ್ತಿದ್ದಾರೆ. ವ್ಯಾಪಾರಸ್ಥರಿಗಾಗಿಯೇ ನಿರ್ಮಿಸಿರುವ ಕಟ್ಟಡವನ್ನು ಬಳಕೆ ಮಾಡಿಕೊಳ್ಳದೇ ಬೀಗ ಹಾಕಿದ್ದಾರೆ. ವ್ಯಾಪಾರಸ್ಥರೇ ಹೋಗುವುದಿಲ್ಲ ಎಂಬ ದೂರು ಇದೆ.‌ ಆ ಜಾಗವನ್ನು ಪಾರ್ಕಿಂಗ್ ಅಥವಾ ಇತರೆ ಕೆಲಸಗಳಿಗೆ ಉಪಯೋಗಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.


ಮಾರುಕಟ್ಟೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಯಾವುದೂ ಸೂಕ್ತ ರೀತಿಯಲ್ಲಿ ಇಲ್ಲ. ಇಲ್ಲಿನ ಅಧಿಕಾರಿಗಳು ಹೆಚ್ಚು ನಿರ್ಲಕ್ಷ್ಯದಿಂದ ಇರುವುದು ಗಮನಕ್ಕೆ ಬಂದಿದೆ. ನಾನೇ ಖುದ್ದು ಪ್ರತಿಯೊಂದನ್ನು ವೀಕ್ಷಿಸಿದ್ದೇನೆ. ಅಧಿಕಾರಿಗಳ ನಿರ್ಲಕ್ಷ್ಯ ಇಲ್ಲಿ ಎದ್ದು ಕಾಣುತ್ತಿದೆ ಎಂದು ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.


ಕೆ.ಆರ್. ಮಾರುಕಟ್ಟೆಗೆ ಲಕ್ಷಾಂತರ ಜನ ಬರುವುದರಿಂದ ಸದಾ ಗಿಜುಗುಡುತ್ತಿದೆ.‌ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಗರದ ವಿವಿಧ ಭಾಗಗಳಲ್ಲಿ ಕೆ.ಆರ್. ಮಾರುಕಟ್ಟೆ ಮಾದರಿಯಲ್ಲೇ ಮಾರುಕಟ್ಟೆ ತೆರೆಯುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೌನ್ಸಿಲಿಂಗ್ ಮೂಲಕ ಒಪ್ಪಿಗೆ ಪಡೆದು, ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದರು. 


ಕೆ.ಆರ್. ಮಾರುಕಟ್ಟೆಯನ್ನು‌ ಕಾಯಕಲ್ಪ ಮಾಡಲಾಗುವುದು. ಜೊತೆಗೆ ಇಲ್ಲಿ ಬಾಡಿಗೆ ನೀಡದೇ ವ್ಯಾಪಾರ ಮಾಡುವವರು ಬಗ್ಗೆ ಹಾಗೂ ಈ ಭಾಗದ ಬಿಬಿಎಂಪಿ ಪ್ರಾಪರ್ಟಿ ಬಗ್ಗೆ 15 ದಿನದೊಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 
ಈ ವೇಳೆ ಮೇಯರ್ ಗಂಗಾಂಭಿಕೆ, ಉಪಮೇಯರ್ ರಮೀಳ‌ಉಮಾಶಂಕರ್, ನಗರ ಪೊಲೀಸ್ ಆಯುಕ್ತ ಸುನೀಲಗ ಕುಮಾರ್ ಉಪಸ್ಥಿತರಿದ್ದರು.