ಮೇ 21ರವರೆಗೆ ರಾಜ್ಯದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Karnataka : ಮೇ 18ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Written by - Zee Kannada News Desk | Last Updated : May 17, 2024, 06:48 PM IST
  • ಹಲವು ಜಿಲ್ಲೆಗಳಲ್ಲಿ ಮೇ 17ರಿಂದ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ
  • ಕೆಲವು ಕಡೆ ಮೇ 18 ರಂದು 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ
  • ಮೇ 16ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಅತಿ ಹೆಚ್ಚು ಅಂದರೆ 6 ಸೆಂ.ಮೀ. ಮಳೆಯಾಗಿತ್ತು
ಮೇ 21ರವರೆಗೆ ರಾಜ್ಯದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ  title=

Some Districts of the karnataka state till May 21 : ಮೇ 18ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮೇ 18ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಹವಾಮಾನ ಇಲಾಖೆ ತಿಳಿಸಿದ್ದು,  ಬೆಂಗಳೂರು ಸೇರಿದಂತೆ ಕೆಲವು ಕಡೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿಮುಂದಿನ  24 ಗಂಟೆಗಳಲ್ಲಿ 30 ಡಿಗ್ರಿ ಸೆಲ್ಸಿಯಸ್‌ನಿಂದ 22 ಡಿಗ್ರಿ ಸೆಲ್ಸಿಯಸ್ ತಾಪಮಾನದೊಂದಿಗೆ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನು ಓದಿ : Pune :  ಏರ್ ಇಂಡಿಯಾ ವಿಮಾನಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ಹಾರಾಟ ರದ್ದು

ಹಲವು ಜಿಲ್ಲೆಗಳಲ್ಲಿ ಮೇ 17ರಿಂದ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ, ಇನ್ನೂ ಕೆಲವು ಕಡೆ ಮೇ 18 ರಂದು 40-50 ಕಿಮೀ ವೇಗದಲ್ಲಿ  ಬಿರುಗಾಳಿ ಬೀಸುವ ಸಾಧ್ಯತೆ ಇದೆ ಮತ್ತು ರಾಜ್ಯದ ಕೆಲವು ಈಗಾಗಲೇ ಭಾರಿ ಮಳೆಯನ್ನೂ ಈಗಾಗಲೇ ಕಂಡಿವೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸುತ್ತದೆ. 

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 17ರಿಂದ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : Neha Shetty : ಅವಕಾಶ ಬೇಕು ಅಂದ್ರೆ ನಿರ್ದೇಶಕರ ಜತೆ ಸಂಪರ್ಕದಲ್ಲಿರಬೇಕು... ತಪ್ಪೇನಲ್ಲ..! ನೇಹಾ ಶೆಟ್ಟಿ ಶಾಕಿಂಗ್‌ ಹೇಳಿಕೆ

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 18 ರಂದು 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

 ಮೇ 16ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಅತಿ ಹೆಚ್ಚು ಅಂದರೆ 6 ಸೆಂ.ಮೀ. ಮಳೆಯಾಗಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News