ಟಿ-20ಯಲ್ಲಿ ʼತ್ರಿʼಶತಕ ಸಿಡಿಸಿದ ಏಕೈಕ ಕ್ರಿಕೆಟಿಗ... ತಿಲಕ್ ವರ್ಮಾ ವಿಶ್ವದಾಖಲೆಯ ಅಬ್ಬರಕ್ಕೆ ಕ್ರಿಕೆಟ್ ಜಗತ್ತೇ ತಬ್ಬಿಬ್ಬು! 67 ಎಸೆತದಲ್ಲಿ 14 ಬೌಂಡರಿ, 10 ಸಿಕ್ಸರ್ ಬಾರಿಸಿ ಫುಲ್ ಶೈನ್
Tilak Varma hat-trick century: ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಶನಿವಾರ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ತಿಲಕ್ ವರ್ಮಾ 67 ಎಸೆತಗಳಲ್ಲಿ 151 ರನ್ ಗಳಿಸಿದರು. ಈ ಅವಧಿಯಲ್ಲಿ 225.37 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿ 14 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನು ಬಾರಿಸಿದರು.
Tilak Varma World Record: ಭಾರತದ ದಿಗ್ಗಜ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್ ಸ್ವರೂಪದಲ್ಲಿ ಸತತ 3 ಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಶನಿವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಹೈದರಾಬಾದ್ ಪರ ಆಡುತ್ತಿದ್ದ ತಿಲಕ್ ವರ್ಮಾ ಇದುವರೆಗೂ ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗಳು ಮಾಡದ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ತಿಲಕ್ ವರ್ಮಾ ಪಾತ್ರರಾಗಿದ್ದಾರೆ.
ಇದನ್ನೂ ಓದಿ: ಈ ಕಾಂಗ್ರೆಸ್ MLA ಮಗಳ ಅಂದಕ್ಕೆ ಸೋಲದವರೇ ಇಲ್ಲ ಗುರು..! ಈಕೆ ದೇವಲೋಕದಿಂದ ಧರೆಗಿಳಿದ ಅಪ್ಸರೆ..
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಶನಿವಾರ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ತಿಲಕ್ ವರ್ಮಾ 67 ಎಸೆತಗಳಲ್ಲಿ 151 ರನ್ ಗಳಿಸಿದರು. ಈ ಅವಧಿಯಲ್ಲಿ 225.37 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿ 14 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನು ಬಾರಿಸಿದರು. ಇನ್ನು ಇದು ಟಿ20 ಕ್ರಿಕೆಟ್‌ನಲ್ಲಿ ತಿಲಕ್ ವರ್ಮಾ ಅವರ ಸತತ ಮೂರನೇ ಶತಕವಾಗಿದೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ಪಂದ್ಯಗಳ ಟಿ20 ಸರಣಿಯಲ್ಲಿ ತಿಲಕ್ ವರ್ಮಾ ಸತತ ಎರಡು ಶತಕ ಸಿಡಿಸಿದ್ದರು.
ತಿಲಕ್ ವರ್ಮಾ ಸತತ ಮೂರು ಶತಕಗಳು:
107* (56 ಎಸೆತಗಳು) - vs ದಕ್ಷಿಣ ಆಫ್ರಿಕಾ, ಸೆಂಚುರಿಯನ್
120* (47 ಎಸೆತಗಳು) - vs ದಕ್ಷಿಣ ಆಫ್ರಿಕಾ, ಜೋಹಾನ್ಸ್‌ಬರ್ಗ್
151 (67 ಎಸೆತಗಳು) - vs ಮೇಘಾಲಯ, ರಾಜ್‌ಕೋಟ್
ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ನಾಯಕತ್ವದ ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಸಂದ ಜಯ: ಜಮೀರ್ ಅಹಮದ್
ತಿಲಕ್ ವರ್ಮಾ ಹೆಸರಿಗೆ ಮತ್ತೊಂದು ದಾಖಲೆ:
ಟಿ20 ಕ್ರಿಕೆಟ್‌ನಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ತಿಲಕ್ ವರ್ಮಾ ಪಾತ್ರರಾಗಿದ್ದಾರೆ. ಅದೇ ಸಮಯದಲ್ಲಿ, ತಿಲಕ್ ವರ್ಮಾ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿ ಅತಿದೊಡ್ಡ ವೈಯಕ್ತಿಕ ಇನ್ನಿಂಗ್ಸ್ ಆಡಿದ ದಾಖಲೆಯನ್ನೂ ಮಾಡಿದ್ದಾರೆ. ಇದಕ್ಕೂ ಮೊದಲು, ಶ್ರೇಯಸ್ ಅಯ್ಯರ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಹೊಂದಿದ್ದರು. 2019 ರಲ್ಲಿ ಸಿಕ್ಕಿಂ ವಿರುದ್ಧ ಶ್ರೇಯಸ್ ಅಯ್ಯರ್ 147 ರನ್ ಗಳಿಸಿದ್ದರು. ಇದೀಗ ಅಯ್ಯರ್ ಅವರನ್ನು ಹಿಂದಿಕ್ಕಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.