ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ; ಮೆರವಣಿಗೆ ನಿಷೇಧ: ಜಿ.ಪರಮೇಶ್ವರ್

ಬೆಂಗಳೂರಿನಲ್ಲಿ ಮಾತ್ರವಲ್ಲದೆ, ಇತರ ಜಿಲ್ಲೆಗಳಲ್ಲಿಯೂ ಕೇವಲ ಸಭಾ ಕಾರ್ಯಕ್ರಮಗಳು ನಡೆಯಬೇಕು. ಯಾವುದೇ ಪರ - ವಿರೋಧದ ಮೆರವಣಿಗೆಗಳಿಗೆ ಅವಕಾಶವಿಲ್ಲ. 

Last Updated : Nov 5, 2018, 06:52 PM IST
ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ; ಮೆರವಣಿಗೆ ನಿಷೇಧ: ಜಿ.ಪರಮೇಶ್ವರ್ title=

ಬೆಂಗಳೂರು: ಪ್ರತಿವರ್ಷದಂತೆಯೇ ಈ ವರ್ಷವೂ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ನಿರ್ಧರಿಸಿದ್ದು, ಎಂದಿನಂತೆಯೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಭಾ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದ್ದು, ಪರ-ವಿರೋಧದ ಮೆರವಣಿಗೆಗಳನ್ನೂ ನಿಷೇಧಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

ಟಿಪ್ಪು ಜಯಂತಿ ಆಚರಣೆ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಸಂಬಂಧ ಸಾಕಷ್ಟು ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದ ಬದಲು ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆ ಒಳಗೆ ಆಚರಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾತ್ರವಲ್ಲದೆ, ಇತರ ಜಿಲ್ಲೆಗಳಲ್ಲಿಯೂ ಕೇವಲ ಸಭಾ ಕಾರ್ಯಕ್ರಮಗಳು ನಡೆಯಬೇಕು. ಯಾವುದೇ ಪರ - ವಿರೋಧದ ಮೆರವಣಿಗೆಗಳಿಗೆ ಅವಕಾಶವಿಲ್ಲ. ಅಷ್ಟೇ ಅಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ, ಪ್ರಚೋದನಕಾರಿ ಪೋಸ್ಟ್ ಹಾಕುವಂತಿಲ್ಲ ಎಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 
 

Trending News