ಬೆಂಗಳೂರು: ಮೈಸೂರು ಹಾಗೂ ಬೆಂಗಳೂರು, ಮೈಸೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ಎಕ್ಸ್ ಪ್ರೆಸ್ ರೈಲುಗಳ ಹೆಸರುಗಳನ್ನು ಭಾರತೀಯ ರೈಲ್ವೆ ಇಲಾಖೆ ಬದಲಾಯಿಸಿ ಆದೇಶ ಹೊರಡಿಸಿದೆ.
ಈ ಸಂಬಂಧ ಭಾರತೀಯ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದ್ದು, 12613/12614 ಸಂಖ್ಯೆಯ ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ರೈಲು ಎಂಬುದಾಗಿ ಮರುನಾಮಕರಣಗೊಳಿಸಿದೆ.
ಇದನ್ನೂ ಓದಿ: DK Shivakumar : ಡಿಕೆ ಶಿವಕುಮಾರ್ಗೆ ಶಾಕ್ ನೀಡಿದ ಇಡಿ!
ಅದೇ ರೀತಿ 16221/16222 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ ರೈಲು ಎಂಬುದಾಗಿ ಮರುನಾಮಕರಣಗೊಳಿಸಲಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ, ಪ್ರತಾಪ್ ಸಿಂಹ
ಮೈಸೂರು-ಬೆಂಗಳೂರು ಎಕ್ಸಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸಪ್ರೆಸ್ ರೈಲುಗಳಿಗೆ ಕ್ರಮವಾಗಿ ಒಡೆಯರ್ ಎಕ್ಸಪ್ರೆಸ್ ಮತ್ತು ಕುವೆಂಪು ಎಕ್ಸಪ್ರೆಸ್ ಎಂದು ಮರುನಾಮಕರಣ ಮಾಡಿದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ಕೇಂದ್ರ ರೈಲ್ವೆ ಸಚಿವರಾದ ಶ್ರೀ @AshwiniVaishnaw ಅವರಿಗೆ ನಾಡಿನ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. pic.twitter.com/i8qGoyLZaw
— Basavaraj S Bommai (@BSBommai) October 7, 2022
ರಾಜ್ಯದ 2 ರೈಲುಗಳ ಹೆಸರುಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಸಂಸದ ಪ್ರತಾಪ್ ಸಿಂಹ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ‘ಮೈಸೂರು-ಬೆಂಗಳೂರು ಎಕ್ಸಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸಪ್ರೆಸ್ ರೈಲುಗಳಿಗೆ ಕ್ರಮವಾಗಿ ಒಡೆಯರ್ ಎಕ್ಸಪ್ರೆಸ್ ಮತ್ತು ಕುವೆಂಪು ಎಕ್ಸಪ್ರೆಸ್ ಎಂದು ಮರುನಾಮಕರಣ ಮಾಡಿದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ನಾಡಿನ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Bharath Bommai : ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿಗೆ 'ಅಂತರಾಷ್ಟ್ರೀಯ ಪ್ರಶಸ್ತಿ' ಗರಿ
ಶುಕ್ರವಾರದ ಶುಭ ಸುದ್ದಿ!
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
— Pratap Simha (@mepratap) October 7, 2022
‘ಶುಕ್ರವಾರದ ಶುಭ ಸುದ್ದಿ! ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ ಜೀ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಸರ್!’ ಅಂತಾ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.