ಬೆಂಗಳೂರು: ಮೈಸೂರು ಹಾಗೂ ಬೆಂಗಳೂರು, ಮೈಸೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ಎಕ್ಸ್ ಪ್ರೆಸ್ ರೈಲುಗಳ ಹೆಸರುಗಳನ್ನು ಭಾರತೀಯ ರೈಲ್ವೆ ಇಲಾಖೆ ಬದಲಾಯಿಸಿ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಈ ಸಂಬಂಧ ಭಾರತೀಯ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದ್ದು, 12613/12614 ಸಂಖ್ಯೆಯ ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ರೈಲು ಎಂಬುದಾಗಿ ಮರುನಾಮಕರಣಗೊಳಿಸಿದೆ.


ಇದನ್ನೂ ಓದಿ: DK Shivakumar : ಡಿಕೆ ಶಿವಕುಮಾರ್​ಗೆ ಶಾಕ್ ನೀಡಿದ ಇಡಿ!


ಅದೇ ರೀತಿ 16221/16222 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ ರೈಲು ಎಂಬುದಾಗಿ ಮರುನಾಮಕರಣಗೊಳಿಸಲಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.


ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ, ಪ್ರತಾಪ್ ಸಿಂಹ


Bharath Bommai : ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿಗೆ 'ಅಂತರಾಷ್ಟ್ರೀಯ ಪ್ರಶಸ್ತಿ' ಗರಿ


ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್‍ ಜೀ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಸರ್!’ ಅಂತಾ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.