ರಾಜಕೀಯ ಚಟಕ್ಕೆ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ: ಈಶ್ವರಪ್ಪ ಟೀಕೆ

ಸಿದ್ದರಾಮಯ್ಯ ತಮ್ಮ ರಾಜಕಿಯ ಚಟ ತೀರಿಸಿಕೊಳ್ಳಲು ಸರ್ಕಾರಕ್ಕೆ ಪತ್ರಗಳನ್ನು ಬರೆಯುತ್ತಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ. 

Last Updated : Jul 14, 2018, 12:51 PM IST
ರಾಜಕೀಯ ಚಟಕ್ಕೆ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ: ಈಶ್ವರಪ್ಪ ಟೀಕೆ title=

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕಿಯ ಚಟ ತೀರಿಸಿಕೊಳ್ಳಲು ಸರ್ಕಾರಕ್ಕೆ ಪತ್ರಗಳನ್ನು ಬರೆಯುತ್ತಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸರ್ಕಾರದ ಯೋಜನೆಗಳಲ್ಲಿನ ಮತ್ತು ಬಜೆಟ್'ನಲ್ಲಿ ಕಂಡುಬಂದ ಹಲವು ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು, ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ. ಇದರಿಂದ ಆಗುವ ಪ್ರಯೋಜನವಾದರೂ ಏನು? ಎಂದು ಈಶ್ವರಪ್ಪ ಪ್ರಶ್ನಿಸಿದರು. 

ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯ ಅವರು, ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಂದರ ಮೇಲೆ ಒಂದರಂತೆ ಪತ್ರಗಳನ್ನು ಬರೆಯುತ್ತಲೇ ಇದ್ದಾರೆ. ಚುನಾವಣೆ ನಂತರ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಪಣ ತೊಟ್ಟಂತಿದೆ. 

Trending News