Rainfall : ಇಂದು ನಾಳೆ ಗುಡುಗು ಮಿಂಚು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್, ರಾಜಧಾನಿಯಲ್ಲಿ ಇಂದು ಸಂಜೆ ಎಂಟು ಗಂಟೆ ಬಳಿಕ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಕೋಲಾರ, ಬೆಂ, ಗ್ರಾ, ಚಿಕ್ಕಮಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : MP Sumalatha : ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ : ಎಂಪಿ ಸುಮಲತಾ ಸ್ಪಷ್ಟನೆ
ವಿಜಯಪುರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ
ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ, ಬಾಬಾನಗರ, ಟಕ್ಕಳಕಿ, ಘೊಣಸಗಿ ಸೇರಿದಂತೆ ಹಲವೆಡೆ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಭಾರಿ ಮಳೆಯಾಗಿದೆ. ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಬಿರುಗಾಳಿಗೆ ಭಾರೀ ಮರ ನೆಲಕ್ಕುರುಳಿದೆ.
[[{"fid":"237495","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
ಅಥಣಿ-ವಿಜಯಪುರ ಹೆದ್ದಾರಿ ಮೇಲೆ ಭಾರೀ ಪ್ರಮಾಣದ ಮರ ಬಿದ್ದ ಕಾರಣ ರಸ್ತೆ ಸಂಚಾರ ಕಡಿತವಾಗಿ, ಪ್ರಯಾಣಿಕರ ಪರದಾಡುತ್ತಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.