ಬೆಂಗಳೂರು : ಇಂದಿನಿಂದ 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಇಂದಿನಿಂದ 3 ದಿನ ಕರಾವಳಿ ಭಾಗದಲ್ಲಿ 'ಯಲ್ಲೋ ಅಲರ್ಟ್'​​ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ)ಯಾಗುವ ನಿರೀಕ್ಷೆ ಇದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಜೂನ್​​ 30ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಥೇಚ್ಛ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ತಿಳಿಸಿದೆ.


ಇದನ್ನೂ ಓದಿ : SSLC Exam 2021 : ನಾಳೆಯೇ 'SSLC' ಪರೀಕ್ಷೆ 2021 ದಿನಾಂಕ ಪ್ರಕಟ!


ಜೂ. 28ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಜೂನ್ 28ರವರೆಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜೂ. 30ರವರೆಗೆ 'ಯಲ್ಲೋ ಅಲರ್ಟ್'(Yellow Alert)​ ಘೋಷಿಸಲಾಗಿದೆ.


ಇದನ್ನೂ ಓದಿ : Delta Plus Variant ತಡೆಗಟ್ಟಲು ತಕ್ಷಣ ಕ್ರಮಕೈಗೊಳ್ಳಿ, ಕರ್ನಾಟಕಕ್ಕೆ ಕೇಂದ್ರ ಸೂಚನೆ


ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ನಿನ್ನೆಯಿಂದ ಭಾರೀ ಮಳೆ(Heavy Rainfall)ಯಾಗುತ್ತಿದೆ. ಭುವನೇಶ್ವರದಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ. ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಸಾಧಾರಣ ಮಳೆಯಾಗಲಿದೆ. ಹಾಗೇ, ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್ನಲ್ಲೂ ಇನ್ನು 3 ದಿನ ಮಳೆಯ ಅಬ್ಬರವಿರಲಿದೆ ಹವಾಮಾನ ಇಲಾಖೆ ತಿಳಿಸಿದೆ.


ಇದನ್ನೂ ಓದಿ : Karnataka Govt : ರಾಜ್ಯ ಸರ್ಕಾರದಿಂದ 'ಮದುವೆ ಸಮಾರಂಭ'ಗಳಿಗೆ ಷರತ್ತುಬದ್ಧ ಅನುಮತಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.