ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ 'ಯೆಲ್ಲೋ ಅಲರ್ಟ್‌' ಘೋಷಿಸಿರುವುದಾಗಿ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.


COMMERCIAL BREAK
SCROLL TO CONTINUE READING

ನೈರುತ್ಯ ಮಾನ್ಸೂನ್‌(Monsoon) ಮಾರುತಗಳು ಇದೆ ತಿಂಗಳ 3 ನೇ ತಾರೀಖಿಗೆ ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.


ಇದನ್ನೂ ಓದಿ : DK Shivakumar : ಹುಬ್ಬಳ್ಳಿ-ಧಾರಾವಾಡ ರೈತರೊಂದಿಗೆ ಸಂವಾದ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್


ಈ ಬಾರಿ ಮೇ 31ಕ್ಕೆ ಮುಂಗಾರು ಆಗಮನವಾಗಲಿದೆ ಎಂದು ಆರಂಭದಲ್ಲಿ ಭಾರತೀಯ ಹವಾಮಾನ ಇಲಾಖೆ(India Meteorological Department) ಹೇಳಿತ್ತು, ಬಳಿಕ ಜೂ.3ಕ್ಕೆ ಕೇರಳಕ್ಕೆ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯಕ್ಕೆ ಒಂದೆರಡು ದಿನ ವಿಳಂಬವಾಗಿ ಜೂ.5 ಅಥವಾ 6ರಂದು ಪ್ರವೇಶವಾಗಲಿದೆ ಎಂದು ಇಲಾಖೆ ತಿಳಿಸಿದೆ.


ಇದನ್ನೂ ಓದಿ : Farmers Crop Loans : ರೈತರಿಗೊಂದು ಸಿಹಿ ಸುದ್ದಿ : ರೈತರ ಬೆಳೆ ಸಾಲಕ್ಕಾಗಿ ₹ 20,810 ಕೋಟಿ ಮೀಸಲು!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ