ಬೆಂಗಳೂರು : ಇತ್ತೀಚೆಗೆ ನಡೆದ ಎರಡು ವಿಧಾನಸಭೆಗಳ ಉಪಚುನಾವಣೆಯಲ್ಲಿ ಗೆದ್ದ ಶಾಸಕರಾದ ಬಸನಗೌಡ ತುರವೀಹಾಳ್ (ಮಸ್ಕಿ) ಹಾಗೂ ಶರಣು ಸಲಗಾರ (ಬಸವಕಲ್ಯಾಣ) ಇಬ್ಬರು ಇಂದು ಪ್ರಮಾಣವಚನ ಸ್ವೀಕರಿಸಿದರು. 


COMMERCIAL BREAK
SCROLL TO CONTINUE READING

ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.


KCET 2021 Exam Dates : ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ : ಆಗಸ್ಟ್ 28, 29ಕ್ಕೆ CET ಪರೀಕ್ಷೆ! 


ಇತ್ತೀಚೆಗೆ ನಡೆದ ಬಸವಕಲ್ಯಾಣ ವಿಧಾನಸಭಾಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರಣು ಸಲಗಾರ(Sharanu Salgar) ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಪರಭಾವಗೊಳಿಸಿದ್ದರು. ಈ ಹಿಂದೆ ಶಾಸಕರಾಗಿದ್ದ ನಾರಾಯಣರಾವ್ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. 


\ಇದನ್ನೂ ಓದಿ : Heavy Rainfall in Karnataka : ಜೂ. 11 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!


ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ(Basanagouda TurVIhal) ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದರು. ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು.


ಇದನ್ನೂ ಓದಿ : DK Shivakumar : 'ಜನರ ಜೀವದ ಜತೆ ಚೆಲ್ಲಾಟ‌ ಬಿಡಿ, ಇಲ್ಲವೇ ಅಧಿಕಾರ ಬಿಟ್ಟು ಇಳಿಯಿರಿ ಕೆಳಗೆ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ