ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 48 ಗಂಟೆ ಗುಡುಗು ಸಹಿತ ಭಾರೀ ಮಳೆ.!!

Today Weather Update: ಶುಕ್ರವಾರವೂ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

Written by - Yashaswini V | Last Updated : May 26, 2023, 10:36 AM IST
  • ಶುಕ್ರವಾರವೂ ಕೂಡ ಸಿಲಿಕಾನ್ ಸಿಟಿಯಲ್ಲಿ ಸಂಜೆ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
  • ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 48 ಗಂಟೆಯಲ್ಲಿ ಸಹಿತ ಗುಡುಗು ಭಾರೀ ಮಳೆ ಸಾಧ್ಯತೆ
  • ದಕ್ಷಿಣ ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 48 ಗಂಟೆ ಗುಡುಗು ಸಹಿತ ಭಾರೀ ಮಳೆ.!! title=

Today Karnataka Weather Update: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. 

ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆಯಲ್ಲಿ ಕರ್ನಾಟಕದ ಮೇಲೂ ಇದರ ಪರಿಣಾಮ ಕಂಡು ಬರಲಿದ್ದು, ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದೆ. ಇದರಿಂದಾಗಿ ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಶುಕ್ರವಾರವೂ ಕೂಡ ಸಿಲಿಕಾನ್ ಸಿಟಿಯಲ್ಲಿ ಸಂಜೆ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 48 ಗಂಟೆಯಲ್ಲಿ ಸಹಿತ ಗುಡುಗು  ಭಾರೀ ಮಳೆ ಸಾಧ್ಯತೆ ಇರುವುದರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಐಎಂಡಿ ಸೂಚನೆ ನೀಡಿದೆ.

ಇದನ್ನೂ ಓದಿ- ಸೋರುತಿಹದು ಕಿಮ್ಸ್ ಆಸ್ಪತ್ರೆ, ಹುಬ್ಬಳ್ಳಿ ಜನರ ಪರದಾಟ

ರಾಜ್ಯದ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್: 
ಭಾರೀ ಮಳೆ ಹಿನ್ನಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ: 
ಕರ್ನಾಟಕದ ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗುತ್ತದೆ. ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. 

ಇದನ್ನೂ ಓದಿ- ಎರಡು ದಿನ ಪವರ್ ಕಟ್ ! ಬೆಂಗಳೂರಿನ ಈ ಏರಿಯಾಗಳಲ್ಲಿ ಇರುವುದಿಲ್ಲ ವಿದ್ಯುತ್ ಸರಬರಾಜು

ದಕ್ಷಿಣ ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News