ನಾಳೆ ದೆಹಲಿಗೆ ಸಿಎಂ ಯಡಿಯೂರಪ್ಪ..! ಯಾರಿಗೆಲ್ಲ ಸಿಗಲಿದೆ ಸಚಿವ ಸ್ಥಾನ..?
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗ ಕೂಡಿ ಬಂತು ಕಾಲ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಂತೂ ಕಾಲ ಕೂಡಿ ಬಂದಂತೆ ಕಾಣುತ್ತಿದ್ದು, ನಾಳೆ (ನ.18) ರಂದು ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳುತ್ತಿದ್ದಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆ ದಟ್ಟವಾಗಿದೆ.
ಆರ್‌ಆರ್ ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶದ ಬೆನ್ನಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಜೋರಾಗಿದೆ. ಈ ಹಿನ್ನೆಲೆ ವಿಶೇಷ ವಿಮಾನದ ಮೂಲಕ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ(B S Yediyurappa), ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಮತ್ತೆ ಮೂರು ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ..!
ಸಿಎಂ ದೆಹಲಿ ಪ್ರವಾಸದ ಹಿನ್ನೆಲೆ ನ.18ರಂದು ಬೆಳಗ್ಗೆ 11.30ಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು 10.30ಕ್ಕೆ ಹಿಂದೂಡಿದ್ದು, 11 ಗಂಟೆಗೆ ದಿಲ್ಲಿ ಕಡೆ ಸಿಎಂ ಬಿಎಸ್‌ವೈ ಪ್ರಯಾಣಿಸಲಿದ್ದಾರೆ. ಬಿಹಾರದಲ್ಲಿ ಸರ್ಕಾರ ರಚನೆ ಮಾಡುವುದರಲ್ಲಿ ಕೇಂದ್ರ ನಾಯಕರು ಬ್ಯುಸಿಯಾಗಿದ್ದರು. ಈ ಹಿನ್ನೆಲೆ ಕೇಂದ್ರೀಯ ನಾಯಕರ ಭೇಟಿ ಸ್ವಲ್ಪ ತಡವಾಗಿದೆ.
ಹಂಪಿಯಲ್ಲಿ ತಲೆ ಎತ್ತಲಿದೆ 'ವಿಶ್ವದ ಅತೀ ಎತ್ತರದ ಹನುಮಂತ'ನ ಪ್ರತಿಮೆ!
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಹಾಯ ಮಾಡಿದ್ದ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಎಚ್ ವಿಶ್ವನಾಥ್ ಹಾಗೂ ಆರ್. ಶಂಕರ್ ಅವರು ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ. ಹಾಗೆಯೇ ಆರ್‌ಆರ್ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮುನಿರತ್ನ ಅವರಿಗೂ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಿಎಸ್ ವೈ ಈಗಾಗಲೇ ಘೋಷಿಸಿದ್ದು, ಯಾರು ಇನ್..? ಯಾರು ಔಟ್ ಎಂಬುದು ಕುತೂಹಲ ಮೂಡಿಸಿದೆ.
ಬಿಜೆಪಿ ನಾಯಕರಿಗೆ 'ಬಿಗ್ ಶಾಕ್' ನೀಡಿದ ಹೈಕಮಾಂಡ್..!
ಈ ಬಾರಿ ದೊಡ್ಡ ಮಟ್ಟದ ಬದಲಾವಣೆಯ ಇಚ್ಛೆ ಇರುವುದಾಗಿ ಉಪ ಚುನಾವಣೆ ಫಲಿತಾಂಶದ ಬಳಿಕ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದರು. ಅಂದರೆ ಸಂಪುಟ ಪುನರ್‌ರಚನೆಗೆ ಬಿಎಸ್‌ವೈ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಚಾರದಲ್ಲಿ ವರಿಷ್ಠರ ಮನಸ್ಸಿನಲ್ಲಿ ಏನಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಹಾಗಾಗಿ ನಾಳೆ ಸಿಎಂ ಹೈಕಮಾಂಡ್ ಜೊತೆ ಚರ್ಚಿಸಿದ ಬಳಿಕವೇ ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ಎನ್ನುವುದು ಖಚಿತವಾಗಲಿದೆ.