ಬೆಂಗಳೂರು: ಅಧಿಕಾರ ವಿಕೇಂದ್ರೀಕರಣದ ಪ್ರಥಮ ಘಟ್ಟ ಎಂದೇ ಹೇಳಲಾಗುವ ಗ್ರಾಮ ಪಂಚಾಯತ್‍ನ ಮೊದಲ ಹಂತದ ಮತದಾನ ನಾಳೆ ನಡೆಯ ಲಿದ್ದು, ಮತದಾರ ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾನೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ರಾಜ್ಯದ 113 ತಾಲೂಕು ಗಳಲ್ಲಿ 3,019 ಗ್ರಾಮಪಂಚಾಯಿತಿಗಳಿದ್ದು, ಒಟ್ಟು ಸ್ಥಾನಗಳು 48,048 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿರುವುದರಿಂದ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ.


COMMERCIAL BREAK
SCROLL TO CONTINUE READING

ಒಟ್ಟು 1,64,550 ನಾಮಪತ್ರ ಸಲ್ಲಿಕೆ ಆಗಿದೆ. 40,352 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. 432 ಸ್ಥಾನಗಳು ನಾಮಪತ್ರ ಸಲ್ಲಿಕೆ ಮಾಡದೆ ಖಾಲಿ ಉಳಿದಿವೆ. ಅಂತಿಮವಾಗಿ 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆ(Election)ಯನ್ನು ವ್ಯವಸ್ಥಿತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಮತಯಂತ್ರ(ಇವಿಎಂ) ಬಳಕೆ ಮಾಡಲಾಗುತ್ತಿದ್ದು, ಉಳಿದೆಡೆ ಮತಪತ್ರಗಳ ಮೂಲವೇ ಚುನಾವಣೆ ನಡೆಯಲಿವೆ.


High Court: ಬಿಎಸ್ ವೈ ಸರ್ಕಾರಕ್ಕೆ ಶಾಕ್​ ಕೊಟ್ಟ ಹೈಕೋರ್ಟ್..!


ಮತದಾನದ ವೇಳೆ ಕೋವಿಡ್ ಹರಡದಂತೆ ಮುನ್ನೆಚ್ಚಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರು ಮತದಾನ ಮಾಡಲು ಕೊನೆಯ 1 ಗಂಟೆ ಅವಕಾಶ ನೀಡಲಾಗುವುದು. ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, 5847 ಚುನಾವಣಾ ಅಧಿಕಾರಿ ಹಾಗೂ 6085 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಿದೆ.


ಬಿಜೆಪಿ ಜತೆ ಜೆಡಿಎಸ್ ವಿಲೀನ ಸಾಧ್ಯವೇ ಇಲ್ಲ : ಕುಮಾರಸ್ವಾಮಿ ಸ್ಪಷ್ಟನೆ


45, 128 ಮತಗಟ್ಟೆಗಳಿಗೆ ಸುಮಾರು 2,70,268 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಈ ಬಾರಿ 45 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡು ಮತಗಟ್ಟೆ ಪ್ರವೇಶಿಸಬೇಕು.


ದುಬಾರಿ ಶುಲ್ಕ ಪಾವತಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅಳಲು ತೋಡಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್


ಕೋವಿಡ್ ಸೋಂಕಿತರು ಮತ್ತು ಶಂಕಿತರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿಯಾಗದಂತೆ ಹಾಗೂ ಸಿಬ್ಬಂದಿಗಳ ಕೊರತೆಯಾಗದಂತೆ ಯೋಜಿಸಿ ಮತದಾನ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.


BJP: 'ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ'