ಬೆಂಗಳೂರು: ಕಳೆದ ಎರಡು ದಿನಗಳಿಂದ ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ.


COMMERCIAL BREAK
SCROLL TO CONTINUE READING

ಈ ನಡುವೆ ಸಿಎಂ ಬಿ.ಎಸ್. ಯಡಿಯೂರಪ್ಪ(CM B.S.Yediyurappa) ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮೊದಲಾದವರು ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.


'ಸೋಮವಾರದಿಂದ ಸರ್ಕಾರಿ ಬಸ್ ದರದಲ್ಲಿ ರಾಜ್ಯದಲ್ಲಿ ರಸ್ತೆಗಿಳಿಯಲಿವೆ ಖಾಸಗಿ ಬಸ್'


ನಾಳೆ ಬೆಳಗ್ಗೆ 10 ಗಂಟೆಗೆ ವಿಕಾಸಸೌಧದ ಸಾರಿಗೆ ಸಚಿವರ ಕಚೇರಿಯಲ್ಲಿ ಹೋರಾಟ ನಿರತ ಸಾರಿಗೆ ಸಂಸ್ಥೆಗಳ ಪ್ರಮುಖರೊಂದಿಗೆ ಸಭೆ ನಡೆಸಲಾಗುವುದು. 10 ಗಂಟೆಗೆ ಟ್ರೇಡ್ ಯೂನಿಯನ್ ಸದಸ್ಯರ ಸಭೆ ನಡೆಸಿ ಹಣಕಾಸು ಇತಿಮಿತಿಯಲ್ಲಿ ಅವರ ಬೇಡಿಕೆಗಳನ್ನು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.


ಸಚಿವ ಲಕ್ಷ್ಮಣ ಸವದಿಗೆ ಕರೆ ಮಾಡಿದ ಮಾಜಿ ಸಿಎಂ: ಯಾಕೆ ಗೊತ್ತಾ?


ಸಿಎಂ ಜೊತೆಗಿನ ಸಭೆ ಮುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಅವರು, ನಾಳೆ ಸಭೆ ನಡೆಸಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸುತ್ತೇವೆ. ಹಣಕಾಸು ಇತಿಮಿತಿ ನೋಡಿಕೊಂಡು ಅವರ ಬೇಡಿಕೆಗಳನ್ನು ಈಡೇರಿಸುತ್ತೇವೆ. ನಮ್ಮ ನೌಕರರ ಮೇಲೆ ನಮಗೆ ವಿಶ್ವಾಸವಿದೆ. ನಾವೆಲ್ಲರೂ ಒಟ್ಟಿಗೆ ಸಾರ್ವಜನಿಕರ ಸೇವೆಗೆ ಸಿದ್ಧವಾಗಿದ್ದೇವೆ. ನಾಳೆ ಎಲ್ಲ ಸಮಸ್ಯೆಗಳು ಬಗೆಹರಿಯುವ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.


ಗ್ರಾ.ಪಂ. ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದ್ರೆ ಸದ್ಯಸತ್ವ ಅಸಿಂಧು..!?


ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರ್ಕಾರಿ ನೌಕರರಿಗಿಂತಲೂ ಉತ್ತಮವಾದ ಸೌಲಭ್ಯ ಕಲ್ಪಿಸಲು ಬದ್ಧರಾಗಿದ್ದು, ಅವರ ಬೇಡಿಕೆ ಈಡೇರಿಸುವ ಕುರಿತು ನಾಳಿನ ಸಭೆಯಲ್ಲಿ ಚರ್ಚೆಗೆ ಸಿದ್ಧವಾಗಿದ್ದೇವೆ. ಟ್ರೇಡ್ ಯೂನಿಯನ್ ಸದಸ್ಯರ ಜೊತೆ ಸಭೆ ನಡೆಸಲಿದ್ದು, ಈಗಾಗಲೇ ಫೋನ್ ಮೂಲಕ ಪ್ರಮುಖರನ್ನು ಸಂಪರ್ಕಿಸಿ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.


ಸಾರಿಗೆ ಸಚಿವರ ಮೇಲೆ ಗರಂ ಆದ ಸಿಎಂ ಬಿಎಸ್ ವೈ, ಗೃಹಸಚಿವ..!