ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಸಂಜೆ 3:50ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ(B.S.Yediyurappa) ನಾಳೆ 3:30ಕ್ಕೆ ನೂತನ ಸಚಿವರಿಗೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ನಾಳೆ 3:50ಕ್ಕೆ 7-8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.


Govind Karjol: 'ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ'


ಸಂಭಾವ್ಯ ಸಚಿವರ ಪಟ್ಟಿ: ಮುನಿರತ್ನ, ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಸಿ.ಪಿ.ಯೊಗೇಶ್ವರ್, ಮುರುಗೇಶ್ ನಿರಾಣಿ, ಎಸ್.ಅಂಗಾರ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ.


Cabinet Expansion: ಬಿಎಸ್ ವೈಗೆ ಸಂಪುಟದಲ್ಲಿ 'ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್'..!


ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಲ್ಳುವ ಸಾಧ್ಯತೆಯಿದ್ದು, ಅಬಕಾರಿ ಸಚಿವ ಹೆಚ್.ನಾಗೇಶ್ ಅವರ ರಾಜೀನಾಮೆ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.


S.Suresh Kumar: 'ಶಾಲಾ-ಕಾಲೇಜುಗಳ ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ