ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಬಂದ್ ಹಿನ್ನೆಲೆ ನಾಳೆ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಡಿಡಿಪಿಐಯವರು ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.


COMMERCIAL BREAK
SCROLL TO CONTINUE READING

ಅಲ್ಲದೆ, ಮುಂಬರುವ 2 ಶನಿವಾರಗಳಂದು ಪೂರ್ಣವಧಿ ಶಾಲೆ ನಡೆಸಿ ರಜೆ ಅವಧಿಯನ್ನು ಸರಿದೂಗಿಸಲು ಸಂಬಂಧಿಸಿದ BEO ರವರಿಗೆ ಸೂಚನೆ ನೀಡಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.. ಇದರ ಬೆನ್ನಲ್ಲೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.


ಇದನ್ನೂ ಓದಿ: ಫೋನ್ ಪದೇ ಪದೇ ಬಿಸಿಯಾಗುತ್ತಾ? ನೀವು ಈ ತಪ್ಪುಗಳನ್ನು ಮಾಡುತ್ತಿದ್ದೀರಿ! ಗಮನಿಸಿ


ಅಲ್ಲದೆ, ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ. ಇದೊಂದು ಪ್ರತಿಭಟನೆ ಅಷ್ಟೇ ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ. ಯಾವುದೇ ಅಹಿತಕರ ಘಟನೆಗಳ ನಡೆಯದಂತೆ ಸಂಘಟನಾಕಾರರು ಎಚ್ಚರ ವಹಿಸಬೇಕು ಎಂದು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.


ಸಂಘಟನಾಕಾರರು ಶಾಂತಿಯುತವಾಗಿ ತಮ್ಮ ಹೋರಾಟ ನಡೆಸಬಹುದು ಇದಕ್ಕೆ ಪೊಲೀಸ್ ಇಲಾಖೆ ಸಹಕಾರ ಸಹ ಇದೆ. ಬಲವಂತವಾಗಿ ಬಂದ್ ಮಾಡಿಸಿದ್ರೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 1500 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.