ಬೆಂಗಳೂರು: ಪೋಷಕರು, ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಜನವರಿ 1 ರಿಂದ ಶಾಲೆ-ಕಾಲೇಜು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ ಎಂದು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

2021 ಜನವರಿ 1 ಒಂದು ಹೊಸ ಯುಗದ ಪ್ರಾರಂಭ ಆಗುತ್ತಿದೆ. ನಾವೆಲ್ಲ 6 ತಿಂಗಳಿಂದ ನಮ್ಮ ರಾಜ್ಯದಲ್ಲಿ ಶಾಲೆಗಳು(Schools) ಇರಲಿಲ್ಲ. ನಮ್ಮ ಗ್ರಾಮೀಣಾ ಭಾಗದ ಮಕ್ಕಳಿಗೆ ಶಿಕ್ಷಣಕ್ಕೆ, ಕಲಿಕೆಗೆ ತೊಂದರೆಯಾಗಿದೆ. ನಮ್ಮ ಶಿಕ್ಷಣ ಇಲಾಖೆಯಿಂದ ಚಂದನ ವಾಹಿನಿ ಮೂಲಕ ಪಾಠಗಳನ್ನು ಕಲಿಸುವ ಕಾರ್ಯಕ್ರಮ ನಡೆಸಿದ್ದೇವು. ಇದೀಗ ಜನವರಿ 1 ರಿಂದ ನಮ್ಮ ರಾಜ್ಯದ ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಮೇಲೆ ಎಸ್‌ಎಸ್‌ಎಲ್ ಸಿ ಮತ್ತೆ 12 ನೇ ತರಗತಿ ಪ್ರಾರಂಭವಾಗುತ್ತಿವೆ. ಉಳಿದ 6,7,8 ಮತ್ತು 9 ನೇ ತರಗತಿಗಳು ವಿದ್ಯಾಗಮದ ಮೂಲಕ ತರಗತಿಗಳು ಆರಂಭವಾಗಲಿವೆ ಎಂದು ತಿಳಿಸಿದರು.


Gram Panchayat Election: ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಸಾಧನೆ ಗಮನಾರ್ಹ- ಕುಮಾರಸ್ವಾಮಿ


ಅನೇಕ ಪೋಷಕರು ಗ್ರಾಮೀಣ ಭಾಗದಲ್ಲಿ ಶಾಲೆಗಳು ಆರಂಭವಾಗಬೇಕೆಂದು ಇಚ್ಛೆ ವ್ಯಕ್ತಪಡಿಸಿದ್ದಾರೆ. ಈ ಕೊರೊನಾ 8 ತಿಂಗಳಿಂದ ಶಾಲಾ ಚಟುವಟಿಕೆ ನಡೆಸಲು ಅಡ್ಡಿಯಾಗಿದೆ. ಈವಾಗ ಮೊದಲನೇ ಹಂತದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಾಗಿದೆ. ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡುತ್ತೇವೆ. ಈ ತರಗತಿಗಳು ಯಶಸ್ವಿಯಾಗಬೇಕು ಎಂದರೆ ಪೋಷಕರು ಸಹಕಾರ ಮಾಡಬೇಕು ಎಂದರು.


New Year : ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ; ಇಂದು ಏನಿರುತ್ತೆ, ಏನಿರಲ್ಲ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..


ಯಾವುದೇ ಆತಂಕ ಇಲ್ಲದೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಉಹಿಸಿ. ನಿಮ್ಮ ಮಕ್ಕಳನ್ನು ಮನೆಯಲ್ಲಿ ಹೇಗೆ ನೋಡಿಕೊಳ್ಳುತ್ತೀರೋ ನಮ್ಮ ಶಿಕ್ಷಕರು ಹಾಗೆ ನೋಡಿಕೊಲ್ಳುತ್ತಾರೆ. ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕೆಂದು ಹೇಳಿದ್ದಾರೆ.


Congress: ಗ್ರಾ. ಪಂ. ಚುನಾವಣೆ ಫಲಿತಾಂಶ ಬೆನ್ನಲ್ಲೇ ಕಾಂಗ್ರೆಸ್​​ಗೆ ‘ಶುರುವಾಯ್ತು ಟೆನ್ಷನ್​’..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.