ಉಡುಪಿಯ ಅಮಾವಾಸ್ಯೆ ಬೈಲು ರತ್ತಾಡಿ ಗ್ರಾಮವನ್ನ ಅಪೋಷಣ ತೆಗೆದುಕೊಂಡ ಸುಂಟರಗಾಳಿ :ಒಂದು ಕೋಟಿಗೂ ಅಧಿಕ ನಷ್ಟ
ಮುಂಜಾನೆ ಎಂಟು ಗಂಟೆ ಸುಮಾರಿಗೆ ರಣರಕ್ಕಸನಂತೆ ಬಂದ ಸುಂಟರಗಾಳಿ ರಟ್ಟಾಡಿ ಗ್ರಾಮಕ್ಕೆ ಗ್ರಾಮವನ್ನೇ ನಡುಗಿಸಿಬಿಟ್ಟಿದೆ. ನೂರಾರು ವರ್ಷಗಳಿಂದ ಬೆಳೆದು ನಿಂತ ಮರಗಳು, ಕೃಷಿಗಾಗಿ ಬೆಳೆಸಿದ ಅಡಿಕೆ ಮರಗಳು,ವಾಣಿಜ್ಯ ಬೆಳೆಗಳು,ತೆಂಗು ಹಲಸು ಮಾವು ಗೇರು ಯಾವ ಮರವನ್ನು ಬಿಡದೆ ಕಿತ್ತು ಎಸೆದು ಸುಂಟರಗಾಳಿ ಮುಂದೆ ಸಾಗಿದೆ.
ಉಡುಪಿ : ಹವಾಮಾನ ಇಲಾಖೆಯ ಯಲೋ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ನಿಟ್ಟಿಸಿರು ಬಿಟ್ಟಿದ್ದ ಗ್ರಾಮಸ್ಥರಿಗೆ ಪ್ರಕೃತಿ ಶಾಕ್ ನೀಡಿದೆ. ಒಮ್ಮಿಂದೊಮ್ಮೆಲೆ ರಣರಕ್ಕಸನಂತೆ ಅಪ್ಪಳಿಸಿದ ಸುಂಟರಗಾಳಿ ಕ್ಷಣಾರ್ಧದಲ್ಲಿ ಗ್ರಾಮದ ಬಹುತೇಕ ಸ್ಥಳಗಳನ್ನ ಆಪೋಷಣ ತೆಗೆದುಕೊಂಡಿದೆ.ಸುಂಟರಗಾಳಿಗೆ ಅಡ್ಡಲಾಗಿ ಸಿಕ್ಕ ಮರ, ಮನೆ ಒಂದನ್ನು ಬಿಡದೆ ಸಂಪೂರ್ಣವಾಗಿ ಧ್ವಂಸ ಮಾಡಿ ಮುಂದೆ ಹೋಗಿದೆ.
ಹೌದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ವ್ಯಾಪ್ತಿಗೆ ಬರುವ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯತ್ ಹಿಂದೆ ನಕ್ಸಲ್ ವಿಚಾರಗಳಿಂದಲೇ ಸಾಕಷ್ಟು ಸುದ್ದಿಯಲ್ಲಿದ್ದಂತ ಗ್ರಾಮ.ಆದರೆ, ಈ ಬಾರಿ ಹಿಂದೆಂದೂ ಕೇಳರಿಯದ ರೀತಿಯಲ್ಲಿ ಆಗಮಿಸಿದ ಸುಂಟರಗಾಳಿಯ ಅಬ್ಬರದಿಂದಾಗಿ ಅಮಾವಾಸ್ಯೆ ಬೈಲು ಮತ್ತೆ ಸುದ್ದಿಯಲ್ಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ರಟ್ಟಾಡಿ ಎನ್ನುವ ಪ್ರದೇಶದಲ್ಲಿ ಮುಂಜಾನೆ ಎಂಟು ಗಂಟೆ ಸುಮಾರಿಗೆ ರಣರಕ್ಕಸನಂತೆ ಬಂದ ಸುಂಟರಗಾಳಿ ರಟ್ಟಾಡಿ ಗ್ರಾಮಕ್ಕೆ ಗ್ರಾಮವನ್ನೇ ನಡುಗಿಸಿಬಿಟ್ಟಿದೆ. ನೂರಾರು ವರ್ಷಗಳಿಂದ ಬೆಳೆದು ನಿಂತ ಮರಗಳು,ಕೃಷಿಗಾಗಿ ಬೆಳೆಸಿದ ಅಡಿಕೆ ಮರಗಳು,ವಾಣಿಜ್ಯ ಬೆಳೆಗಳು,ತೆಂಗು ಹಲಸು ಮಾವು ಗೇರು ಯಾವ ಮರವನ್ನು ಬಿಡದೆ ಕಿತ್ತು ಎಸೆದು ಸುಂಟರಗಾಳಿ ಮುಂದೆ ಸಾಗಿದೆ. ಸುಮಾರು 20ಕ್ಕೂ ಅಧಿಕ ಮನೆಗಳಿಗೆ ಸುಂಟರಗಾಳಿ ಹಾನಿ ಮಾಡಿದ್ದು ಗ್ರಾಮದ ಸಂಪೂರ್ಣ ವಿದ್ಯುತ್ ವ್ಯವಸ್ಥೆ ಒಂದು ವಾರಗಳ ಕಾಲ ಸರಿಯಾಗದಂತೆ ವಿದ್ಯುತ್ ಕಂಬಗಳನ್ನು ಧರೆಗುರುಳಿಸಿದೆ.
ಇದನ್ನೂ ಓದಿ : ಪವಿತ್ರಗೌಡ ಮೇಲೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ
ಬಿರುಗಾಳಿಗೆ ಕುಂದಾಪುರ ತಾಲೂಕಿನ ಅಮಾಸೆಬೈಲಿನ ರಟ್ಟಾಡಿ ಗ್ರಾಮದ ಬಾಲಕೃಷ್ಣ ನಡಬೂರು ಇವರ 50 ಅಡಿಕೆ ಮರ ಹಾನಿಗೊಂಡಿದ್ದರೆ, ರಾಜೀವ ನಡಬೂರು ಇವರ 100ಕ್ಕೂ ಅಧಿಕ ಅಡಿಕೆ ಮರ ತುಂಡಾಗಿ ನೆಲಕ್ಕುರುಳಿದೆ.ಯಲ್ಲ ನಡಬೂರು ಇವರ 50 ಅಡಿಕೆ ಮರ, ಅಮಾಸೆಬೈಲು ಗ್ರಾಮದ ಕುರುಬಲಮಕ್ಕಿಯ ದ್ಯಾವ ಪೂಜಾರಿ ಇವರ 70 ಅಡಿಕೆ ಮರ ಹಾಗೂ ಎರಡು ತೆಂಗಿನನ ಮರ ತುಂಡಾಗಿ ನೆಲಕ್ಕೆ ಉರುಳಿದೆ.ಅಮಾಸೆಬೈಲು ಜಡ್ಕಿನಗದ್ದೆ ಬಸವ ಪೂಜಾರಿ ಇವರ 60 ಅಡಿಕೆ ಮರ, ಎರಡು ತೆಂಗಿನ ಮರಗಳು ಹಾಗೂ ಅಮಾಸೆ ಬೈಲು ಹೆದ್ದಾರಿಗದ್ದೆಯ ತೇಜ ಕುಲಾಲರ 40ಕ್ಕೂ ಅಧಿಕ ಅಡಿಕೆ ಮರಗಳಿಗೆ ಸಂಪೂರ್ಣ ಹಾನಿಯಾಗಿದೆ. ರಟ್ಟಾಡಿ ಗ್ರಾಮದ ಮಹಾಬಲ ಕಾನ್‌ಬೈಲು ಇವರ ಮನೆಯ ಮಾಡಿನ ತಗಡು ಹಾಗೂ ಸಿಮೆಂಟ್ ಶೀಟುಗಳು ಹಾರಿಹೋಗಿವೆ.ರಟ್ಟಾಡಿಯ ನರಸಿಂಹ ನಡಬೂರು ಇವರ ನಿರ್ಮಾಣ ಹಂತದ ದನದ ಕೊಟ್ಟಿಗೆ ಮೇಲ್ಚಾವಣಿಯ ಹೆಂಚು ಹಾಗೂ ಶೀಟುಗಳು ಹಾರಿಹೋಗಿವೆ. ಹುಂತ್ರಿಕೆಯ ವಸಂತ ಶೆಟ್ಟಿ ಅವರ 70 ಅಡಿಕೆ ಮರ, ಕತ್ಕೋಡು ನಾಗರಾಜ ಪ.ಜಾತಿ ಇವರ ಮನೆಯ ಮೇಲೆ ತೆಂಗಿನ ಮರ ಹಾಗೂ ಸಾಗುವಾನಿ ಮರ ಬಿದ್ದು ಮನೆ ಸಂಪೂರ್ಣ ದ್ವಂಸಗೊಂಡಿದೆ. ರಟ್ಟಾಡಿ ತೆಂಕಮಕ್ಕಿಯ ಗೋವಿಂದ ಪೂಜಾರಿ ಅವರ 140 ಅಡಿಕೆ ಮರ, ಮನೆ ಹಾಗೂ ದನದ ಕೊಟ್ಟಿಗೆಗೆ ಹಾನಿಯಾಗಿದೆ. ರೇಖಾನಾಥ ರೈ ಅವರು 400 ಅಡಿಕೆ ಮರಗಳು, ತೆಂಕೂರು ಗಣೇಶ ಶೆಟ್ಟಿ ಇವರ 200 ಅಡಿಕೆ ಮರ ಹಾಗೂ ಪಂಪುಸೆಟ್ ಶೆಡ್‌ಗೆ ಹಾನಿಯಾಗಿದೆ. ರಾಕೇಶ್ ಶೆಟ್ಟಿ ಇವರ 150 ಅಡಿಕೆ ಮರ ಧರಾಶಾಹಿಯಾಗಿವೆ. ಹೊರ್ಲಿಜೆಡ್ಡಿನ ಬಾಲಕೃಷ್ಣ ಶೆಟ್ಟಿ ಇವರ 1000 ಅಡಿಕೆ ಮರ, 15 ತೆಂಗಿನ ಮರ, 5 ಹಲಸಿನ ಮರ, 8ಮಾವಿನ ಮರ, 50ಗೇರುಮರ ಹಾಗೂ 50 ರಬ್ಬರ್ ಮರ ಸೇರಿ ತೋಟಕ್ಕೆ ಸಂಪೂರ್ಣ ಹಾನಿಯಾಗಿದೆ. ತೆಂಕೂರು ಮಹೇಶ್ಚಂದ್ರ ಶೆಟ್ಟಿ ಇವರ 250 ಅಡಿಕೆ ಮರ, 25 ತೆಂಗಿನ ಮರ, ಪಂಪುಸೆಟ್ ಶೆಡ್ ಹಾನಿಯಾಗಿದ್ದರೆ, ಚಂದ್ರಶೇಖರ ಶೆಟ್ಟಿ ಇವರ 250 ಅಡಿಕೆ ಮರ ಹಾಗೂ ವಾಸದ ಮನೆಗೆ ಭಾಗಶ: ಹಾನಿಯಾಗಿದೆ. ಹೀಗೆ ಪಟ್ಟಿ ಮಾಡುತ್ತಾ ಹೋದರೆ ಸುಮಾರು 5000ಕ್ಕೂ ಅಧಿಕ ಅಡಿಕೆ ಮರಗಳು ಇನ್ನಿತರ ಅಪಾರ ಬೆಳೆ ಬಾಳುವ ಮರಗಳು ಮನೆ ಕೊಟ್ಟಿಗೆ ಹೀಗೆ ಸುಮಾರು ಒಂದು ಕೋಟಿಗೂ ಅಧಿಕ ಮೊತ್ತದ ಸ್ವತ್ತು ನಾಶವಾಗಿರುವುದಾಗಿದೆ.
ಇದನ್ನೂ ಓದಿ : ಸಾಮಾಜಿಕ ಜಾಲತಾನದಲ್ಲಿ ಯುವ ಪತ್ನಿ ಶ್ರೀದೇವಿ ಪೋಸ್ಟ್
ಸುಂಟರಗಾಳಿಯ ಅನಾಹುತದ ಬಳಿಕ ರಟ್ಟಾಡಿ ಗ್ರಾಮ ಪಂಚಾಯತ್ ಪಿಡಿಒ ಗ್ರಾಮ ಪಂಚಾಯತ್ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲ ನಡೆಸಿದ್ದಾರೆ. ಇನ್ನು ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಕುಂದಾಪುರ ತಹಶೀಲ್ದಾರ್ ಶೋಭಾ ಲಕ್ಷ್ಮಿ ಹಾನಿಯಾದ ಸ್ಥಳಗಳನ್ನ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿ ನೀಡುವುದಾಗಿ ತಿಳಿಸಿದ್ದಾರೆ. ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಅವರು ರಟ್ಟಾಡಿಯ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರಕಾರದಿಂದ ಪರಿಹಾರ ನೀಡುವ ಕುರಿತು ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಒಟ್ಟಾರೆಯಾಗಿ ಯಮದೂತನಂತೆ ಆಗಮಿಸಿದ ಸುಂಟರಗಾಳಿ ರಟ್ಟಾಡಿ ಗ್ರಾಮವನ್ನ ಸಂಪೂರ್ಣ ನಾಶ ಮಾಡಿದೆ ಎಂದರೆ ತಪ್ಪಾಗಲಾರದು. ಜಿಲ್ಲೆಯಲ್ಲಿ ಇನ್ನೂ ಕೂಡಾ ಮಳೆ ಮುಂದುವರಿದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.