Tourists Banned For Beach: ಮಲ್ಪೆ ಬೀಚ್‌ನಲ್ಲಿ ಯಾವುದೇ ಅಪಾಯ ಸಂಭವಿಸದಂತೆ ತಡೆಯಲು ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ಸದ್ಯಕ್ಕೆ ತಡೆ ಬೇಲಿಯನ್ನು ನಿರ್ಮಿಸಲಾಗಿದೆ. ಸಮುದ್ರ ಪ್ರಸಿದ್ಧ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಬಲೆಯನ್ನು ದಾಟಿ ಹೋಗದಂತೆ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಉಡುಪಿ ಜಿಲ್ಲೆಗೆ (Udupi District) ಯಥಾಪ್ರಕಾರದಂತೆ ಈ ಬಾರಿ ಜೂನ್ ಪ್ರಾರಂಭದಲ್ಲಿ ಮುಂಗಾರು (Monsoon) ಪ್ರವೇಶವಾಗಿದೆ. ಈ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಮತ್ತು ಗಾಳಿಯ ಒತ್ತಡಕ್ಕೆ ಸಮುದ್ರ ಪ್ರಕ್ಷಿಪ್ತಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಹೆಸರಾಂತ ಬೀಚ್‌ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಹೌದು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪ್ರಮುಖ ಆಕರ್ಷಣೆ ಎಂದರೆ ಅಲ್ಲಿನ ಮನಮೋಹಕ ಬೀಚ್‌ಗಳು (Beaches). ಅದರಲ್ಲೂ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಎಂದರೆ ಅದು ವಿಶ್ವ ಪ್ರಸಿದ್ಧಿ. ಹೀಗಾಗಿ ಮಲ್ಪೆ ಬೀಚ್‌ನ ತೀರದಲ್ಲಿ ಮರಳಿನಲ್ಲಿ ಆಟವಾಡುತ್ತಾ ತೆರೆಯಲ್ಲಿ ಮಿಂದೆಳಲು ರಾಜ್ಯದ ಮೂಲೆ ಮೂಲೆಗಳಿಂದಲೂ ಕೂಡ ಪ್ರವಾಸಿಗರು ಬರುತ್ತಾರೆ. ಆದರೆ ಜಿಲ್ಲೆಯಲ್ಲಿ ಮುಂಗಾರು ಮಳೆಯ ಪ್ರವೇಶದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮದ ಅಂಗವಾಗಿ ಸುಂದರವಾದ ಮಲ್ಪೆ ಬೀಚ್‌ಗೆ ಬೇಲಿ ಅಳವಡಿಸಲಾಗಿದೆ.
ಮಲ್ಪೆ ಬೀಚ್‌ನಲ್ಲಿ (Malpe Beach) ಯಾವುದೇ ಅಪಾಯ ಸಂಭವಿಸದಂತೆ ತಡೆಯಲು ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ಸದ್ಯಕ್ಕೆ ತಡೆ ಬೇಲಿಯನ್ನು ನಿರ್ಮಿಸಲಾಗಿದೆ. ಸಮುದ್ರ ಪ್ರಸಿದ್ಧ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಬಲೆಯನ್ನು ದಾಟಿ ಹೋಗದಂತೆ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ- ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ- 8 ಜಿಲ್ಲೆಗಳಿಗೆ ರೆಡ್ ಅಲರ್ಟ್
ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಮಲ್ಪೆ ಬೀಚ್‌ನಲ್ಲಿ ತಡೆ ಬೇಲಿ ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಿಸಿದ್ದಾರೆ. ಇದರ ಜೊತೆಗೆ ಆಯಕಟ್ಟಿನ ಜಾಗಗಳಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ.
ಇನ್ನು ಪ್ರವಾಸಿಗರ ಸುರಕ್ಷತೆಯ (Tourist safety) ದೃಷ್ಟಿಯಿಂದ ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜಿಸಲಾಗಿದೆ. ನಿರಂತರವಾಗಿ ಸ್ಯಾಂಡ್ ಬೈಕ್ ಮೂಲಕ ಬೀಚ್ನ ಗಸ್ತುತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಾ, ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಳೆಗಾಲದ ಅರಿವೇ ಇಲ್ಲದ ಹೊರ ಜಿಲ್ಲೆ ಮತ್ತು ಹೊರರಾಜ್ಯದ ಪ್ರವಾಸಿಗರು ಮಲ್ಪೆ ಬೀಚ್ಗೆ ಇನ್ನೂ ಕೂಡ ಭೇಟಿ ನೀಡುತ್ತಿದ್ದು ಬೀಚ್ ನ ನೀರಿನಲ್ಲಿ ಆಟವಾಡಲು ಅವಕಾಶ ಸಿಗದೇ ಇರುವ ಹಿನ್ನೆಲೆಯಲ್ಲಿ ಬೇಸರದಿಂದ ಹಿಂದಿರುಗುತ್ತಿದ್ದಾರೆ. ಇನ್ನು ಕೆಲವು ಪ್ರವಾಸಿಗರು ಬೀಚ್ನ ಮರಳಿನ ಮೇಲೆ ಆಟವಾಡುತ್ತಾ, ಗಟ್ಟಿ ಮಾಡುತ್ತಾ ವಿಡಿಯೋ ಚಿತ್ರಿಸಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡು ತೆರುಳುತ್ತಿದ್ದಾರೆ.
ಇದನ್ನೂ ಓದಿ- ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ
ಒಟ್ಟಾರೆಯಾಗಿ ಮಳೆಗಾಲದಲ್ಲಿ ತೆರೆಗಳ ಅಬ್ಬರದ ಅರಿವಿಲ್ಲದೆ ಬರುವ ಪ್ರವಾಸಿಗರು ಜೀವ ಕಳೆದುಕೊಳ್ಳುವುದನ್ನು ತಪ್ಪಿಸಲು ಈ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಇಷ್ಟು ವ್ಯವಸ್ಥೆಗಳನ್ನ ಮಾಡಿದರು ಕೂಡ ಪ್ರತಿ ವರ್ಷವೂ ಕೂಡ ನೂರಾರು ಪ್ರವಾಸಿಗರು ಸಮುದ್ರ ನೋಡುವ ಆತುರದಲ್ಲಿ ನೀರಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿರುವುದು ಮಾತ್ರ ವಿಪರ್ಯಾಸವೇ ಸರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.