ಜೋರಾಗಿ ಹಾಡು ಹಾಕಿದ್ದಕ್ಕೆ ಟ್ರ್ಯಾಕ್ಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಏಟು..!
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ `ವಿಶ್ವರಾಜ್ ಕತ್ತಿ ಶುಗರ್ಸ್` ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಚಿಕ್ಕೋಡಿ: ಟ್ರ್ಯಾಕ್ಟರ್‌ನಲ್ಲಿ ಹೆಚ್ಚು ಸೌಂಡ್ ಇಟ್ಟು ಹಾಡು ಹಾಕಿದ್ದಕ್ಕೆ ಚಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿದ್ದು, ಸಚಿವರೊಬ್ಬರ ಒಡೆತನದ ಸಕ್ಕರೆ ಕಾರ್ಖಾನೆ ಸಿಬ್ಬಂದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.
ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ 'ವಿಶ್ವರಾಜ್ ಕತ್ತಿ ಶುಗರ್ಸ್' ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್ ಚಾಲಕನ (Tractor Driver) ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಕೂಡ ಇದೀಗ ವೈರಲ್ ಆಗುತ್ತಿದೆ.
ಇದನ್ನೂ ಓದಿ- ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ಕಾಯ್ದೆ ರದ್ದು: ಸಿದ್ದರಾಮಯ್ಯ
ಹಾಡು ಹಾಕಿದ್ದಕ್ಕೆ ಏಟು..?
ಟ್ರ್ಯಾಕ್ಟರ್ ಚಾಲಕ (Tractor Driver) ಜೋರಾಗಿ ಹಾಡು ಹಾಕಿದ್ದ ಅನ್ನೋ ಕಾರಣಕ್ಕೆ ಸಿಬ್ಬಂದಿ ರೊಚ್ಚಿಗೆದ್ದು ಹಲ್ಲೆ ನಡೆಸಿದ್ದಾರಂತೆ. ಕಾರ್ಖಾನೆಯ ಕಚೇರಿಗೆ ಚಾಲಕನನ್ನ ಕರೆದೊಯ್ದು ಕಬ್ಬು ಹಾಗೂ ಕೋಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ತಪ್ಪಾಗಿದೆ ಬಿಟ್ಟುಬಿಡಿ ಅಂತಾ ಅಂಗಲಾಚಿ ಚಾಲಕ ಕೇಳಿಕೊಂಡರೂ ಪದೇಪದೇ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ- ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’: ಹಿಂದಿ ಹೇರಿಕೆ ವಿರುದ್ಧ ಮತ್ತೆ ಗುಡುಗಿದ ಎಚ್ಡಿಕೆ
ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.