"ಸಂಚಾರ ದಟ್ಟಣೆ ನಿವಾರಣೆ, ಸೈಬರ್‌ ಕ್ರೈಮ್‌ ನಿಯಂತ್ರಣಕ್ಕೆ ಆದ್ಯತೆ ನೀಡಿ: ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ

 ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

Written by - Prashobh Devanahalli | Edited by - Manjunath N | Last Updated : May 23, 2023, 04:22 PM IST
  • ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ
  • ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು
  • ಸಂಚಾರ ದಟ್ಟಣೆ ನಿವಾರಣೆ, ಸೈಬರ್‌ ಕ್ರೈಮ್‌ ನಿಯಂತ್ರಣಕ್ಕೆ ಆದ್ಯತೆ ನೀಡಿ
"ಸಂಚಾರ ದಟ್ಟಣೆ ನಿವಾರಣೆ, ಸೈಬರ್‌ ಕ್ರೈಮ್‌ ನಿಯಂತ್ರಣಕ್ಕೆ ಆದ್ಯತೆ ನೀಡಿ: ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ title=

ಬೆಂಗಳೂರು: ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: ಮಳೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಅವಾಂತರ ಬುಡ ಸಮೇತ ಕಿತ್ತು ಬಿದ್ದ ಅಪರೂಪದ ಮರಗಳು

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ದಾಖಲೆ ಇಲ್ಲದೇ ಕಾರಿನಲ್ಲಿ ಕೋಟಿ ಕೋಟಿ ಹಣ ಸಾಗಾಟ

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News