Traffic Rules: ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ  ಕ್ರಮ ಕೈಗೊಂಡಿರುವ ಸಂಚಾರ ಪೊಲೀಸರು ಇನ್ಮುಂದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಎಡಿ‌ಜಿ‌ಪಿ ಅಲೋಕ್ ಕುಮಾ‌ರ್ (ADGP Alok Kumar), ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ವಾಸ್ತವವಾಗಿ, ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ಹಲವು ನಗರ ಪ್ರದೇಶಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಸಂಚರಿಸುವುದು (Wrong side driving), ಫುಟ್ ಪಾತ್ ಮೇಲೆ ಮೋಟಾರ್ ಸೈಕಲ್ ಚಾಲನೆ  (Driving on Foot path) ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತದೆ. 


ಅಷ್ಟೇ ಅಲ್ಲ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಜೀವನಕ್ಕೆ, ಅಪಾಯಕಾರಿ ಎಂಬ ಅರಿವಿದ್ದರೂ ಸಹ ರಾಷ್ಟ್ರೀಯ ಹೆದ್ದಾರಿಗಳಲ್ಲೂ (National Highway) ಇಂತಹ ಹುಚ್ಚಾಟ ಮಾಡುವವರಿಗೇನೂ ಕಡಿಮೆ ಇಲ್ಲ.  ಇಂತಹ ಹುಚ್ಚಾಟಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರಿಗೆ ಬಿಸಿ ಮುಟ್ಟಿಸಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. 


ಇದನ್ನೂ ಓದಿ- NHAI New Rules: ಇಂತಹವರಿಂದ ದುಪ್ಪಟ್ಟು ಟೋಲ್ ವಸೂಲಿ, ಮನೆಯಿಂದ ಹೊರಡುವ ಮೊದಲು ತಪ್ಪದೇ ತಿಳಿಯಿರಿ


ಹೈ ಬೀಮ್ ಲೈಟ್, ಕಣ್ಣು ಕುಕ್ಕುವ ಎಲ್‌ಈ‌ಡಿ ಲೈಟ್ ಬಳಕೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಿರುವ ಎಡಿ‌ಜಿ‌ಪಿ ಆಲೋಕ್ ಕುಮಾರ್ (ADGP Alok Kumar), ಒನ್‌ವೇ, ಫುಟ್ ಬಾತ್ ಮೇಲೆ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಒನ್‌ವೇ'ಯಲ್ಲಿ ವಾಹನ ಚಾಲನೆ (Driving On One Way) ಮಾಡುವವರ ಮೇಲೆ ಬಿಎನ್‌ಎಸ್ 281, 184 ಐಎಂವಿ ಕಾಯ್ದೆಯಡಿ ಎಫ್‌ಐ‌ಆರ್ ದಾಖಲಿಸುವಂತೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. 


ಇದನ್ನೂ ಓದಿ- Traffic Rules: ಸಂಚಾರ ನಿಯಮ ಉಲ್ಲಂಘಿಸಿದ ವಿದ್ಯಾರ್ಥಿಗಳು, ಟ್ರಾಫಿಕ್ ಪೊಲೀಸರಿಂದ ಪೋಷಕರಿಗೆ ಎಚ್ಚರಿಕೆ..!


ಈ ಸುತ್ತೋಲೆಯಲ್ಲಿ ಸದರಿ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.