ಕೌನ್ಸಿಲಿಂಗ್ ಮೂಲಕ ಉಪ ನೋಂದಣಾಧಿಕಾರಿಗಳ ವರ್ಗಾವಣೆ: ರಾಜ್ಯ ಇತಿಹಾಸದಲ್ಲೇ ಮೊದಲ ಪ್ರಯತ್ನ
ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ, ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು.
ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ವರ್ಗಾವಣೆ ದಂಧೆಯ ಬಗ್ಗೆ ಹಲವು ನಾಯಕರು ಸದನದಲ್ಲೇ ಧ್ವನಿ ಎತ್ತಿದ್ದರು. ಹೀಗಾಗಿ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ, ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು.
ಇದನ್ನೂ ಓದಿ : ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ
ಅದರಂತೆ ಇಂದು ರಾಜ್ಯದ 31 ಜಿಲ್ಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪ ನೋಂದಣಿ ಕಚೇರಿಗಳಲ್ಲಿ ನೋಂದಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ 90ಜನ ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪನೋಂದಣಾಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಈ ವರ್ಗಾವಣೆ ಅವಧಿಯಲ್ಲಿ ಒಂದು ರೂಪಾಯಿ ಸಹ ಹಣ ವಹಿವಾಟು ನಡೆದಿರುವ ಬಗ್ಗೆ ದೂರುಗಳು ಬಂದಿಲ್ಲ ಎಂಬುದು ಉಲ್ಲೇಖಾರ್ಹ.
ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ. ಮಹೇಶ್ ಅವರ ನೇತೃತ್ವದಲ್ಲಿ ನವೆಂಬರ್ 04ರಿಂದಲೇ ಕೌನ್ಸಿಲಿಂಗ್ ನಡೆಸಲಾಗಿತ್ತು. ಈ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ ಸ್ವ-ಇಚ್ಚೆಯಿಂದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರ ಆಯ್ಕೆಯನ್ನು ಆಧರಿಸಿ ವರ್ಗಾಯಿಸಿ ಆದೇಶಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.