ಪರಭಾಷಾ ಪತ್ರ, ಆದೇಶಗಳನ್ನು ಕನ್ನಡಿಕರಿಸಿ;-ಟಿ.ಎಸ್.ನಾಗಾಭರಣ

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ, ಸುತ್ತೋಲೆಗಳನ್ನು ಕನ್ನಡಿಕರಿಸಿ, ಆಡಳಿತ ನಿರ್ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.

Written by - Zee Kannada News Desk | Last Updated : Jul 31, 2022, 06:01 PM IST
  • ಜಿಲ್ಲೆಯ ಎಲ್ಲ ಶಾಲಾ, ಕಾಲೇಜಗಳಲ್ಲಿ ಕನ್ನಡ ವಾತಾವರಣ ಸೃಷ್ಟಿಸಲು ಶಿಕ್ಷಣ ಇಲಾಖೆ ಮೂಲಕ ಕ್ರಮವಹಿಸಲಾಗಿದೆ.
  • ಪ್ರತಿ ತಿಂಗಳು ಕನ್ನಡ ಪತ್ರ ವ್ಯವಹಾರದ ಬಗ್ಗೆ ಇಲಾಖಾವಾರು ವರದಿ ಪಡೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪರಭಾಷಾ ಪತ್ರ, ಆದೇಶಗಳನ್ನು ಕನ್ನಡಿಕರಿಸಿ;-ಟಿ.ಎಸ್.ನಾಗಾಭರಣ title=

ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ, ಸುತ್ತೋಲೆಗಳನ್ನು ಕನ್ನಡಿಕರಿಸಿ, ಆಡಳಿತ ನಿರ್ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕನ್ನಡ ಭಾಷಾ ಅನುಷ್ಠಾನ ಕುರಿತು ಪ್ರಗತಿ ಪರುಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ಎಲ್ಲ ಇಲಾಖೆಗಳು ಕನ್ನಡ ಬಳಕೆ ಮಾಡಬೇಕು. ಸರಕಾರ ಮತ್ತು ಸಾರ್ವಜನಿಕರೊಂದಿಗೆ ಕನ್ನಡದಲ್ಲಿಯೇ ಪತ್ರ ವ್ಯವಹಾರ ಮಾಡಬೇಕು. ಕೇಂದ್ರೀಯ ವಿದ್ಯಾಲಯ, ಸಿಬಿಎಸ್‍ಸಿ ಶಾಲೆಗಳಲ್ಲಿ ಕನ್ನಡ ಬಳಕೆಗೆ ಆದ್ಯತೆ ಸಿಗುವಂತೆ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಗಮನಹರಿಸಬೇಕೆಂದು ಅವರು ಹೇಳಿದರು.

ರಾಜ್ಯದಲ್ಲಿ ಕನ್ನಡ ಭಾಷಾ ಕಲಿಕಾ ಅಧಿನಿಯಮವಾಗಿ ಜಾರಿಯಾಗಿ ಐದು ವರ್ಷಗಳು ಕಳೆದಿವೆ. ಎಲ್ಲ ಇಲಾಖೆಗಳ ಎಲ್ಲ ಪತ್ರ ವ್ಯವಹಾರ ಕನ್ನಡದಲ್ಲಿಯೇ ಆಗಬೇಕು. ನಗರದ ಪ್ರಮುಖ ರಸ್ತೆ, ವೃತ್ತಗಳಿಗೆ ಸ್ಥಳೀಯ ನಾಯಕರ, ಹೋರಾಟಗಾರರ ಮತ್ತು ಐತಿಹಾಸಿಕ ಸ್ಥಳಗಳ ಹೆಸರು ನಾಮಕರಣ ಆಗಬೇಕು. ಕನ್ನಡ ಉಳಿಸಿ, ಬೆಳೆಸುವಲ್ಲಿ ಅಧಿಕಾರಿಗಳ ಪಾತ್ರವೂ ಮುಖ್ಯವಾಗಿದೆ ಎಂದು ಟಿ.ಎಸ್.ನಾಗಾಭರಣ ಅವರು ಹೇಳಿದರು.

ಧಾರವಾಡ ಸಾಂಸ್ಕøತಿಕ ರಾಜಧಾನಿ, ರಾಜ್ಯದ ಅನೇಕ ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿದೆ. ಕನ್ನಡ ಅನುಷ್ಠಾನದಲ್ಲಿ ಧಾರವಾಡ ಮಾದರಿಯಾಗಬೇಕು. ಧಾರವಾಡ ಮಾದರಿ ಎಂದೇ ಪರಿಚಿತವಾಗಬೇಕು. ಜಾಲತಾಣಗಳು ಸಂಪೂರ್ಣ ಕನ್ನಡಮಯವಾಗಬೇಕು. ಪ್ರಾಧಿಕಾರದ ನಿರಂತರ ಪ್ರಯತ್ನದಿಂದ ಜಾಲತಾಣಗಳ ಮುಖಪುಟ ಕನ್ನಡದಲ್ಲಿ ಬರುತ್ತಿದೆ. ಅದರ ಒಳ ಹೂರಣವೂ ಕನ್ನಡಮಯವಾಗಬೇಕು ಎಂದರು.

ಇದನ್ನೂ ಓದಿ : Commonwealth Games 2022: ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಖಾತೆ ತೆರೆದ ಮೀರಾಬಾಯಿ ಚಾನು

ಕನ್ನಡ ಕಾಣಿಸಬೇಕು, ಕನ್ನಡ ಕೇಳಿಸಬೇಕು. ಅಂದಾಗ ಮಾತ್ರ ಪ್ರತಿ ಇಲಾಖೆ, ವ್ಯವಹಾರಗಳು ಕನ್ನಡಮಯವಾಗುತ್ತವೆ ಎಂದು ಆಶಿಸಿದರು.

ಹೊರ ರಾಜ್ಯ, ದೇಶಗಳಿಂದ ಬಂದು ರಾಜ್ಯದಲ್ಲಿ ವ್ಯಾಪಾರ, ವ್ಯವಹಾರ ಮಾಡಲು ಇಚ್ಚಿಸುವ ಮತ್ತು ಬಂಡವಾಳ ಹೂಡುವ ಉದ್ದಿಮೆಗಳು ರಾಜ್ಯ ಸರಕಾರದ ಭಾಷಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ವಾಣಿಜ್ಯ ವ್ಯವಹಾರಕ್ಕೆ ಅನುಮತಿ ಪಡೆಯುವಾಗ ಕನ್ನಡ ಬಳಕೆಯ ಷರತ್ತುಗಳನ್ನು ಪೂರೈಸುವ ಖಾತರಿ ಮಾಡಿಕೊಳ್ಳಬೇಕು ಎಂದು ಟಿ.ಎಸ್.ನಾಗಾಭರಣ ತಿಳಿಸಿದರು.
ಸರೋಜನಿ ಮಹಿಷಿ ವರದಿ ಸೇರಿದಂತೆ ಕನ್ನಡ ಅನುಷ್ಠಾನಕ್ಕಾಗಿ ರಚನೆಗೊಂಡ ಎಲ್ಲ ಆಯೋಗದ ವರದಿಗಳಿಗೆ ಕಾಯ್ದೆ ಸ್ವರೂಪ ನೀಡಿ, ಜಾರಿಗೊಳಿಸಬೇಕು. ಶಾಲಾ ಹಂತದಲ್ಲಿ ಕನ್ನಡ ಬೆಳೆಸಲು ಪಾಲಕರು, ಪೋಷಕರು ಪ್ರೊತ್ಸಾಹ ನೀಡುವ ವಾತಾವರಣ ರೂಪಿಸಬೇಕು ಎಂದರು.
ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದ ಸಮಗ್ರ ಕನ್ನಡ ಅಭಿವೃದ್ಧಿಗಾಗಿ ಈಗಾಗಲೇ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸರಕಾರ ಅಧಿವೇಶನದಲ್ಲಿ ಇದಕ್ಕೆ ಕಾಯ್ದೆ ಸ್ವರೂಪ ನೀಡಬೇಕೆಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, ಧಾರವಾಡವು ಕನ್ನಡದ ಅಗ್ರ ನೆಲ. ಜಿಲ್ಲೆಯ ಆಡಳಿತದಲ್ಲಿ ಕನ್ನಡ ಬಳಕೆ ಆಗುತ್ತಿದೆ. ಜಿಲ್ಲಾ ಮಟ್ಟದ ಇಲಾಖೆಗಳಲ್ಲಿ ಕನ್ನಡ ಅನುಷ್ಠಾನಗೊಳಿಸಿರುವ ಬಗ್ಗೆ ಪರಿಶೀಲನೆ, ಮಾರ್ಗದರ್ಶನ ನಿರಂತರವಾಗಿ ನಡೆಯುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ನೀಡುವ ಎಲ್ಲ ಸಲಹೆ, ಸೂಚನೆಗಳನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಶಾಲಾ, ಕಾಲೇಜಗಳಲ್ಲಿ ಕನ್ನಡ ವಾತಾವರಣ ಸೃಷ್ಟಿಸಲು ಶಿಕ್ಷಣ ಇಲಾಖೆ ಮೂಲಕ ಕ್ರಮವಹಿಸಲಾಗಿದೆ. ಪ್ರತಿ ತಿಂಗಳು ಕನ್ನಡ ಪತ್ರ ವ್ಯವಹಾರದ ಬಗ್ಗೆ ಇಲಾಖಾವಾರು ವರದಿ ಪಡೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಮಾತನಾಡಿ, ನೋಂದಣಿ ಇಲಾಖೆಯಲ್ಲಿ ಎಲ್ಲ ಕಾಗದಪತ್ರಗಳನ್ನು ಕನ್ನಡ ಭಾಷಾಯಲ್ಲಿಯೇ ನೋಂದಾಯಿಸಲು ಕ್ರಮ ವಹಿಸಬೇಕು ಮತ್ತು ನೋಂದಣಿ ಕಚೇರಿ ಮುಖ್ಯ ದ್ವಾರದಲ್ಲಿ ಈ ಕುರಿತು ಮಾಹಿತಿ ಫಲಕಗಳನ್ನು ಹಾಕಬೇಕೆಂದು ತಿಳಿಸಿದರು.

ಇದನ್ನೂ ಓದಿ : ಶೂಟಿಂಗ್ ನಲ್ಲಿ 4 ಚಿನ್ನ, 2 ಕಂಚಿನ ಪದಕ ಗೆದ್ದ ತಮಿಳು ನಟ ಅಜಿತ್

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧಿಕಾರದ ಅಧಿಕಾರಿ ಮಹೇಶ.ಎನ್ ವೇದಿಕೆಯಲ್ಲಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಸಭೆ ನಿರ್ವಹಿಸಿದರು.ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಎಸ್.ಎಸ್.ಹಿರೇಮಠ, ಡಾ.ರಾಮು ಮೂಲಗಿ,ಎಚ್.ಎಸ್.ಕಿರಣ, ಗದಗಯ್ಯ ಹಿರೇಮಠ, ನಾರಾಯಣ ಪಾಂಡುರಂಗಿ ಉಪಸ್ಥಿತರಿದ್ದರು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ನಿಂಗಪ್ಪ ಕುಮ್ಮಣ್ಣವರ, ಮಹಾನಗರಪಾಲಿಕೆ ಅಪರ ಆಯುಕ್ತ ಶಂಕರಾನಂದ ಬನಶಂಕರಿ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುಲಸಿದ್ದಪ್ಪ ಪೂಜೇರಿ, ಜಿಲ್ಲಾ ಎನ್.ಐ.ಸಿ ಅಧಿಕಾರಿ ಮೀನಾಕುಮಾರಿ ಎಂ, ಕೃಷಿ ಇಲಾಖೆ ಉಪ ನಿರ್ದೇಶಕಿ ಜಯಶ್ರೀ ಹಿರೇಮಠ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣವರ, ವಿಭಾಗೀಯ ನಿಯಂತ್ರನಾಧಿಕಾರಿ ಡಾ.ಶಶಿಧರ ಚನ್ನಪ್ಪಗೌಡರ, ಪ್ರಾದೇಶಿಕ ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿ ಎ.ಎ.ಖಾಜಿ, ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಇನ್ಸ್ ಪೆಕ್ಟರ್ ಜಯಪಾಲ ಪಾಟೀಲ, ಆಹಾರ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಸುಧೀರ ಸಾವಕಾರ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಎಂ. ನಾಡಗೌಡರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಕನ್ನಡ  ಅನುಷ್ಠಾನಗೊಳಿಸಿರುವ ಕುರಿತು ವರದಿ ಸಲ್ಲಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News