)
ಹೈಕೋರ್ಟ್ ಛೀಮಾರಿ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯಲು ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿ ಪರ ವಕೀಲರು ಹೈಕೋರ್ಟ್ಗೆ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್ ಮುಷ್ಕರ ಮಾಡದಂತೆ ನಿರ್ದೇಶನ ನೀಡಿ ನೋಟಿಸ್ ಕೊಟ್ಟಿದ್ದರೂ ಮುಷ್ಕರ ನಡೆಸಿದ್ದ ಸಂಘಟನೆಗಳಿಗೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಕೋರ್ಟ್ ಖಡಕ್ ಸೂಚನೆ ನೀಡಿದೆ.
ಇಂದು ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ನ ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ ಜೋಷಿ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆದಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಇನ್ನು ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನ 2 ದಿನ ವಿಸ್ತರಣೆ ಮಾಡಿದ್ದು ವಿಚಾರಣೆಯನ್ನ ಆಗಸ್ಟ್ 7 ಕ್ಕೆ ಹೈಕೋರ್ಟ್ ಮುಂದೂಡಿದೆ.
ಸರ್ಕಾರಿ ಪರ ವಕೀಲರಾದ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು ನಿನ್ನೆ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಂಘಟನೆಯೊಂದಿಗೆ ಸಭೆ ನಡೆಸಿದ್ದಾರೆ. ನಿನ್ನೆ ರಾತ್ರಿಯಷ್ಟೇ ನೋಟಿಸ್ ಸಿಕ್ಕಿದೆ. ರಾಜಿ ಸಂಧಾನಕ್ಕೆ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದಕ್ಕೆ ಮಾತುಕತೆ ಏನಾಗಿದೆ? ಎಂದು ಹೈಕೋರ್ಟ್ ಪ್ರಶ್ನಿಸಿತು. ಅದಕ್ಕೆ ಎಜಿ, ಈವೆರೆಗೆ ಸರ್ಕಾರ ನಡೆಸಿದ ಮಾತುಕತೆಗಳ ವಿವರ ನೀಡಿದ್ದು ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆಯಂತೆ ಸಂಧಾನ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬಳಿಕ ಸಾರಿಗೆ ಸಂಘಟನೆಗಳ ಪರ ವಕೀಲರನ್ನ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ.ಜೋಷಿ ನೇತೃತ್ವದ ಪೀಠ ನ್ಯಾಯಾಂಗ ನಿಂದನೆಯ ಎಚ್ಚರಿಕೆಯನ್ನ ಜಂಟಿ ಕ್ರಿಯಾ ಸಮಿತಿಯ ವಕೀಲರಿಗೆ ನೀಡಿದೆ . ಸದ್ಯ ಎಸ್ಮಾ ಜಾರಿಯಾಗಿದೆ ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು. ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ, ಜನಸಾಮಾನ್ಯರನ್ನ ಒತ್ತೆಯಾಗಿರಿಸುವುದನ್ನ ಕೋರ್ಟ್ ಸಹಿಸಲ್ಲ ಎಂದು ಎಚ್ಚರಿಸಿದೆ.
ಇದನ್ನೂ ಓದಿ : ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಇನ್ನು ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನು 2 ದಿನ ವಿಸ್ತರಣೆ ಮಾಡಿದೆ. ಹಾಗೆ ಇನ್ನು ವಿಚಾರಣೆಯನ್ನ ಆಗಸ್ಟ್ 7 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದ್ದು ಸದ್ಯ ವಿಚಾರಣೆ ನಂತರ ಸಾರಿಗೆ ನಿಗಮಗಳ ನೌಕರರ ಸಂಘದ ಪರ ವಕೀಲರ ಮಾತುಕತೆ ಮೇರೆಗೆ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರವ್ ಮುಷ್ಕರವನ್ನ ಮುಂದೂಡಲಾಗಿದೆ ಎಂದಿನಂತೆ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ ಎಂದಿದ್ದಾರೆ.
ನಮಗೆ ಸರ್ಕಾರ 36 ತಿಂಗಳ ಅರಿಯರ್ಸ್ ಒಟ್ಟಿಗೆ ನೀಡಬೇಕು. ಈಗ ಹೈ ಕೋರ್ಟ್ ಸೂಚನೆ ಮೇರೆಗೆ ಮುಷ್ಕರವನ್ನು ಮುಂದೂಡಿದ್ದೇವೆ ಅಷ್ಟೇ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.