ಬೆಂಗಳೂರು: ಸಾರಿಗೆ ಸಿಬ್ಬಂದಿ ಮಿತ್ರರಿಗೆ ಮಾತುಕತೆಗೆ ಮುಕ್ತ ಆಹ್ವಾನ ನೀಡುತ್ತದೆ. ಮಾತುಕತೆಗೆ ಬಾರದೇ ಇದ್ದರೇ ಸೋಮವಾರದಿಂದ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ ಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವಂತ ವ್ಯವಸ್ಥೆ ಆರಂಭಿಸಲಾಗುತ್ತದೆ. ಪ್ಲಾನ್ ಮಾಡಿ ಈ ಬಗ್ಗೆ ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂಬುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಲಕ್ಷ್ಮಣ್ ಸವದಿ(Laxman savadi), ಇಂದು ಮತ್ತು ನಿನ್ನೆ ನಾಡಿನ ಕೆಲವೆಡೆ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದು, ಮುಷ್ಕರ ನಡೆಯುವಂತಾಗಿರುವುದು ಮತ್ತು ಬಸ್ಸುಗಳಿಗೆ ಕಲ್ಲು ತೂರಾಟ ಹಾಗೂ ಹಾನಿಗೊಳಿಸುವಿಕೆಯಂತಹ ಅಹಿತಕರ ಘಟನೆ ನಡೆದಿರುವುದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಈ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.
ಸಚಿವ ಲಕ್ಷ್ಮಣ ಸವದಿಗೆ ಕರೆ ಮಾಡಿದ ಮಾಜಿ ಸಿಎಂ: ಯಾಕೆ ಗೊತ್ತಾ?
ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ ಸಿಬ್ಬಂದಿಗಳ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಯಾವತ್ತೂ ಸಹಾನುಭೂತಿ ಇದೆ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿಯೂ ಸಹ ಎಲ್ಲಾ ಸಿಬ್ಬಂದಿಗಳಿಗೆ ಯಾವುದೇ ಕಡಿತವಿಲ್ಲದೇ ಸಂಬಳ ನೀಡಿದ್ದು ಇದಕ್ಕೆ ನಿದರ್ಶನವಾಗಿದೆ ಎಂದಿದ್ದಾರೆ.
ಗ್ರಾ.ಪಂ. ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದ್ರೆ ಸದ್ಯಸತ್ವ ಅಸಿಂಧು..!?
ನಮ್ಮ ಸಾರಿಗೆ ಸಂಸ್ಥೆಗಳ ಯಾವುದೇ ಒಕ್ಕೂಟಕ್ಕೆ ಸೇರಿಲ್ಲದವರು ಏಕಾಏಕಿಯಾಗಿ ಯಾವುದೇ ಮುನ್ಸೂಚನೆ ನೀಡದೇ ಬಸ್ ಸಂಚಾರ ಸ್ಥಗಿತಗೊಳ್ಳುವಂತೆ ಮುಷ್ಕರಕ್ಕೆ ಕರೆಕೊಟ್ಟಿರುವುದು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಬಂದ ಕೆಲವು ಸಿಬ್ಬಂದಿಗಳಿಗೆ ತೊಂದರೆ ನೀಡಿರುವುದು ಹಾಗೂ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಯಾಗುವಂತೆ ವರ್ತಿಸಿರುವುದು ದುರದೃಷ್ಟಕರವಾಗಿದೆ. ಇಂತಹ ಬೆಳವಣಿಗೆಗಳಿಂದ ಸಾರಿಗೆ ಸಂಸ್ಥೆಗಳ ನೌಕರರಿಗೆ ದೊಡ್ಡ ಹಾನಿಯಾಗುವುದಲ್ಲದೇ ಸಾರ್ವಜನಿಕರಿಗೆ ಅನವಶ್ಯಕವಾಗಿ ತೊಂದರೆ ಉಂಟಾಗುವುದಕ್ಕೆ ಕಾರಣವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಾರಿಗೆ ಮಿತ್ರರು ಸರ್ಕಾರದೊಂದಿಗೆ ಪರಸ್ಪರ ಸಹಕಾರದೊಂದಿಗೆ ತಮ್ಮ ದೈನಂದಿನ ಕರ್ತವ್ಯ ಮುಂದುವರೆಸಬೇಕೆಂದು ನಾನು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಸಾರಿಗೆ ಸಚಿವರ ಮೇಲೆ ಗರಂ ಆದ ಸಿಎಂ ಬಿಎಸ್ ವೈ, ಗೃಹಸಚಿವ..!
ಸಾರಿಗೆ ಸಿಬ್ಬಂದಿಗಳೆಂದರೆ ನನಗೆ ನನ್ನ ಕುಟುಂಬವಿದ್ದಂತೆ, ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ. ಹಿಂದೆಯೂ ಅನೇಕ ಸಂದರ್ಭಗಳಲ್ಲಿ ಇದನ್ನು ಸಾರಿಗೆ ಸಿಬ್ಬಂದಿಗಳು ಮನಗಂಡಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೂ ಸಹ ಸಾರಿಗೆ ಇಲಾಖೆಯ ಎಲ್ಲಾ ನೌಕರರ ಬೇಡಿಕೆಗಳ ಬಗ್ಗೆ ಉದಾರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಮುಂದೆಯೂ ನಮ್ಮ ಸಾರಿಗೆ ಸಿಬ್ಬಂದಿಗಳು ತಮ್ಮ ಬೇಡಿಕೆಗಳನ್ನು ತಿಳಿಸಬೇಕೆಂದರೆ ನನ್ನ ಬಳಿ ಬರುವುದಕ್ಕೆ ಸದಾ ಮುಕ್ತ ಅವಕಾಶವಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ನಮ್ಮ ಸಾರಿಗೆ ಒಕ್ಕೂಟಗಳು ಮತ್ತು ಸಿಬ್ಬಂದಿಗಳು ನನ್ನನ್ನು ಭೇಟಿ ಮಾಡಿ ತಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳುವುದಕ್ಕೆ ಸದಾ ಸ್ವಾಗತವಿದೆ ಎಂದು ತಿಳಿಸಿದ್ದಾರೆ.
ಕೋಲಾರದ ನರಸಾಪುರದಲ್ಲಿ ತಲೆ ಎತ್ತಿದ್ದ 'ದೇಶದ ಮೊದಲ iPhone ಕಂಪನಿ' ಧ್ವಂಸ!