ಮತ್ತೆ ಮುಷ್ಕರಕ್ಕೆ ಸಜ್ಜಾದ ಸಾರಿಗೆ ನೌಕರರು; ಸ್ತಬ್ಧವಾಗುತ್ತಾ ಸಾರಿಗೆ ಸಂಚಾರ..?

Transport Workers Strike: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷರೂ ಆಗಿರುವ ಮಾಜಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಮತ್ತು KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಮಹತ್ವದ ಸಭೆಯನ್ನು ಕರೆದಿದ್ದಾರೆ.

Written by - Puttaraj K Alur | Last Updated : Dec 17, 2022, 11:43 AM IST
  • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ
  • ಸಾರಿಗೆ ನೌಕರರ ಪ್ರತಿಭಟನೆಯಿಂದ ರಾಜ್ಯದಲ್ಲಿ ಮತ್ತೆ ಸ್ತಬ್ಧವಾಗುತ್ತಾ ಸಾರಿಗೆ ಸಂಚಾರ?
  • ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಮುಷ್ಕರ ಫಿಕ್ಸ್ ಎಂದು ಹೇಳುತ್ತಿರುವ ಸಾರಿಗೆ ಮುಖಂಡರು
ಮತ್ತೆ ಮುಷ್ಕರಕ್ಕೆ ಸಜ್ಜಾದ ಸಾರಿಗೆ ನೌಕರರು; ಸ್ತಬ್ಧವಾಗುತ್ತಾ ಸಾರಿಗೆ ಸಂಚಾರ..?  title=
ಮತ್ತೆ ಸಾರಿಗೆ ನೌಕರರ ಮುಷ್ಕರ!

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಾರಿಗೆ ಸಂಚಾರವು ಸ್ತಬ್ಧವಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ನಿಟ್ಟಿನಲ್ಲಿ ಇಂದು ಸಾರಿಗೆ ಮುಖಂಡರ ಮಹತ್ವದ ಸಭೆ ನಡೆಯಲಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಮುಷ್ಕರ ಫಿಕ್ಸ್ ಅಂತಾ ಮುಖಂಡರು ಹೇಳುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷರೂ ಆಗಿರುವ ಮಾಜಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಮತ್ತು KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಮಹತ್ವದ ಸಭೆಯನ್ನು ಕರೆದಿದ್ದಾರೆ. ಕಳೆದೆರೆಡು ಬಾರಿ ಮುಷ್ಕರ ಮಾಡಿದ್ರೂ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸಿಲ್ಲ. 2020ರ ಡಿಸೆಂಬರ್ 11ರಿಂದ 14ರವರೆಗೆ 4 ದಿನ ಮೊದಲ ಮುಷ್ಕರ ನಡೆದಿತ್ತು. 2021ರ ಏಪ್ರಿಲ್ 7ರಿಂದ 21ರವರೆಗೆ 15 ದಿನಗಳ ಕಾಲ 2ನೇ ಮುಷ್ಕರ ನಡೆದಿತ್ತು.

ಇದನ್ನೂ ಓದಿ: "ಸಂವಿಧಾನಕ್ಕೆ ಕುತ್ತು ಬಂದಿದ್ದು, ಅದನ್ನು ಉಳಿಸಿಕೊಳ್ಳಬೇಕು"

10 ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಮಾಡಿದ್ದರು. ಆದರೆ 9 ಬೇಡಿಕೆಗಳನ್ನು ಈಡೇರಿಸುತ್ತೇವೆಂದು ಸರ್ಕಾರ ಮಾತು ಕೊಟ್ಟಿತ್ತು. ಆದರೆ ಇಲ್ಲಿಯವರೆಗೆ ಒಂದೇ ಒಂದು ಬೇಡಿಕೆಯನ್ನು ಈಡೇರಿಸಿಲ್ಲ. ಬೇಡಿಕೆ ಈಡೇರದ ಹಿನ್ನೆಲೆ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ ನಡೆಸಿದ್ದಾರೆ. ಇಂದಿನ ಸಭೆಯಲ್ಲಿ ಮುಷ್ಕರದ ದಿನಾಂಕ ನಿರ್ಧಾರವಾಗುವ ಸಾಧ‍್ಯತೆ ಇದೆ.

KSRTC, BMTC, ವಾಯುವ್ಯ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಸೇರಿ 1 ಲಕ್ಷ 3 ಸಾವಿರ ಜನ ನೌಕರರಿದ್ದಾರೆ. ರಾಜ್ಯದ 10 ಸಂಘಟನೆಗಳ ಮುಖಂಡರ ಸಭೆಗೆ ಆಹ್ವಾನ ನೀಡಲಾಗಿದೆ. ಬೆಂಗಳೂರಿನ ಬಸವನಗುಡಿಯ ಡಿವಿಜಿ ರೋಡ್‍ನಲ್ಲಿರುವ ಭಾಸ್ಕರ್ ರಾವ್ ಕಚೇರಿಯಲ್ಲಿ ಸಭೆ ನಡೆಯಲಿದೆ.  

ಸಭೆಯಲ್ಲಿ ಭಾಗವಹಿಸಲಿರುವ ಸಂಘಟನೆಗಳು

1) KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್

2) ಐಎನ್ಟಿಯುಸಿ (INTUC)

3) ಸಿಐಟಿಯು (CITU)

4) ಬಿಎಂಎಸ್ (BMS)

5) ಯೂನೈಟೆಡ್ ಎಂಪ್ಲಾಯಿಸ್ ಯೂನಿಯನ್ (UAU)

6) ಕೆಬಿಎನ್ಎನ್ (KBNN)

7) KSRTC ನೌಕರರ ಕೂಟ

8) ಜಂಟಿ ಕ್ರಿಯಾ ಸಮಿತಿ

9) ಸಮಾನ ನಮಸ್ಕಾರ ವೇದಿಕೆ

10) KSRTC ನೌಕರರ Sc/ST ಸಂಘಟನೆಗಳು

ಇದನ್ನೂ ಓದಿ: ಜಮೀರ್ ಕ್ಷೇತ್ರತ್ಯಾಗ; ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News