“ಅವನ ಕುಟುಂಬ ಒಂದು ವರ್ಷದಲ್ಲಿ ಸಾಯಲಿ..” ಹುಂಡಿಯಲ್ಲಿ ಸಿಕ್ಕಿತು ಬೆಚ್ಚಿ ಬೀಳುವ ಪತ್ರಗಳು..!
ಮತ್ತೊಂದು ಕಾಗದದಲ್ಲಿ “ನರಸಿಂಹ ಸ್ವಾಮಿ ಈ ನಂಬರುಗಳಿಗೆ ಮೊದಲನೇ ಬಹುಮಾನ ಬರುವಂತೆ ಮಾಡು ನಿನ್ನ ಹುಂಡಿಗೆ 101 ರೂ. ಹಾಕುತ್ತೇನೆ” ಎಂದು ಲಾಟರಿ ಟಿಕೆಟ್ ನಂಗಳನ್ನು ಬರೆದು ಕಾಣಿಕೆ ಹುಂಡಿಗೆ ಹಾಕಿದ್ದಾನೆ. ಇನ್ನು, ದೇಗುಲದ ಹುಂಡಿಯಲ್ಲಿ 1,87,565 ಹಣ ಸಂಗ್ರಹವಾಗಿದೆ ಎಂದು ಸಿಬ್ಬಂದಿ ಮಾಹಿತಿ ಹಂಚಿಕೊಂಡಿದ್ದಾರೆ
ಚಾಮರಾಜನಗರ: ದೇವರ ಬಳಿ ನಾನಾ ಬಗೆಯ ಪ್ರಾರ್ಥನೆಗಳನ್ನು ಮಾಡಿ ಅದನ್ನು ಪತ್ರಗಳ ಮೂಲಕ ಕಾಣಿಕೆ ಹುಂಡಿಯಲ್ಲಿ ಹಾಕುವುದು ಸಾಮಾನ್ಯ. ಇದರಲ್ಲಿ ತಮ್ಮ ಅಭಿವೃದ್ಧಿಗೆ, ಪ್ರೇಮ ಸಮಸ್ಯೆ ನಿವಾರಣೆಗೆ ಸಂಬಂಧಿಸಿದ್ದೇ ಅನೇಕ ಪತ್ರಗಳಿರುತ್ತವೆ. ಆದರೆ, ಇಲ್ಲೋರ್ವ ಒಂದು ಕುಟುಂಬ ಸರ್ವನಾಶ ಆಗಲೆಂಬ ವಿಚಿತ್ರ, ಆಘಾತಕಾರಿ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ.
ಇದನ್ನೂ ಓದಿ: Santro Ravi CID Custody: ಜ.30ರವರೆಗೆ ಸಿಐಡಿ ವಶಕ್ಕೆ ಸ್ಯಾಂಟ್ರೋ ರವಿ!
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯದ ಹುಂಡಿ ಎಣಿಕೆಯು ಇಂದು ನಡೆದಿದ್ದು ಈ ವೇಳೆ ಭಕ್ತರ ಕೋರಿಕೆ ಪತ್ರಗಳು ಸಿಕ್ಕಿದೆ. ಅದರಲ್ಲಿ, ಬಳ್ಳಾರಿ ಜಿಲ್ಲೆ ಎಂದು ನಮೂದಿಸಿರುವ ಭಕ್ತನೋರ್ವ "ಹನುಮಾರ್ ರಾಮ ನಾಯಕ ಎಂಬಾತ ಬಾಯಲ್ಲಿ ರಕ್ತ ಬಿದ್ದು ಸಾಯಬೇಕು. ಇದನ್ನು ನೋಡಿ ನೀಲಾಬಾಯಿ ಕೊರಗಿ ಕೊರಗಿ ಸಾಯಬೇಕು, ನೀಲಗಿರಿ ನಾಯಕ, ಲೋಕೇಶಿ ನಾಯಕ, ಮುಕ್ಕಿಬಾಯಿ, ಇವರೆಲ್ಲರೂ ಕೂಡಾ ಅವರನ್ನು ನೋಡಿ ನರಳಿ ಸಾಯಬೇಕು. ಅವರುಗಳು ನಮ್ಮ ಮನೆಯ ಹತ್ತಿರವೇ ಬಾರದ ಹಾಗೆ ಮಾಡಬೇಕು. ಇವರೆಲ್ಲರೂ ಒಂದು ವರ್ಷದ ಒಳಗೆ ಸಾಯಬೇಕು” ಎಂದು ಕಾಗದದಲ್ಲಿ ಬರೆದು ಹುಂಡಿಯಲ್ಲಿ ಹಾಕಿದ್ದಾರೆ.
ಬಳ್ಳಾರಿ ಭಕ್ತನ ಕಾಗದ ಓದಿದ ಹುಂಡಿ ಎಣಿಕೆ ಸಿಬ್ಬಂದಿ ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ಈ ರೀತಿ ಎಲ್ಲಾ ಬೇಡಿಕೆ ಇರುತ್ತವೆಯೇ..? ಸಾವನ್ನು ಬಯಸುವ ಮಟ್ಟಿಗೆ ಆತ ನೊಂದಿರುವವನೇ..? ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಅಂತರ ಧರ್ಮ ಪ್ರೀತಿ:
ದೇವರಿಗೆ ಒಂದು ಅಂತರ ಧರ್ಮೀಯ ಪ್ರೀತಿ ಪತ್ರವೂ ಸಿಕ್ಕಿದೆ. ಅದರಲ್ಲಿ, ಯುವತಿಯೊಬ್ಬಳು “ಶಾಹಿದ್ ಖಾನ್ ವರ್ಷಕ್ಕೆ ಒಂದು ಬಾರಿಯಾದರೂ ದಿಲ್ಲಿಯಿಂದ ಬರಬೇಕು, ನಾನು ಹಿಂದೂ ಅವನು ಮುಸ್ಲಿಮ್. ಆದರೆ ನಾನು ತಪ್ಪು ಮಾಡುತ್ತಿಲ್ಲ ನನಗೆ ಅವನಿಷ್ಟ ಅವನಿಗೆ ನಾನು ಇಷ್ಟ. ನನ್ನ ಜೀವನವೇ ಅವನು. ಈ ಬೇಡಿಕೆ ಈಡೇರಿದರೆ ಪ್ರತಿ ತಿಂಗಳೊಮ್ಮೆ ನಿನ್ನ ಸನ್ನಿಧಿಗೆ ಬರುವೆ” ಎಂದು ಕಾಗದದಲ್ಲಿ ಬರೆದು ಹರಕೆ ಕಟ್ಟಿಕೊಂಡಿದ್ದಾಳೆ.
ಮತ್ತೊಂದು ಕಾಗದದಲ್ಲಿ “ನರಸಿಂಹ ಸ್ವಾಮಿ ಈ ನಂಬರುಗಳಿಗೆ ಮೊದಲನೇ ಬಹುಮಾನ ಬರುವಂತೆ ಮಾಡು ನಿನ್ನ ಹುಂಡಿಗೆ 101 ರೂ. ಹಾಕುತ್ತೇನೆ” ಎಂದು ಲಾಟರಿ ಟಿಕೆಟ್ ನಂಗಳನ್ನು ಬರೆದು ಕಾಣಿಕೆ ಹುಂಡಿಗೆ ಹಾಕಿದ್ದಾನೆ.
ಇದನ್ನೂ ಓದಿ: "ಬಿಜೆಪಿಯವರು ಅಧಿಕಾರ ಇದ್ದಾಗ ಏನನ್ನೂ ಮಾಡದೆ, ಅಧಿಕಾರ ಹೋಗುವಾಗ ಮಾಡುತ್ತೇವೆ ಎನ್ನುತ್ತಿದ್ದಾರೆ"
ಇನ್ನು, ದೇಗುಲದ ಹುಂಡಿಯಲ್ಲಿ 1,87,565 ಹಣ ಸಂಗ್ರಹವಾಗಿದೆ ಎಂದು ಸಿಬ್ಬಂದಿ ಮಾಹಿತಿ ಹಂಚಿಕೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.