ರಾಜ್ಯದ ಯಶಸ್ವಿನಿ ಯೋಜನೆಯಡಿಯಲ್ಲಿ ಸಹಕಾರಿಗಳಿಗೆ ಚಿಕಿತ್ಸೆ ಸೌಲಭ್ಯ

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. 

Written by - Manjunath N | Last Updated : Jan 5, 2025, 12:10 AM IST
  • ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ.
  • ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು,
ರಾಜ್ಯದ ಯಶಸ್ವಿನಿ ಯೋಜನೆಯಡಿಯಲ್ಲಿ ಸಹಕಾರಿಗಳಿಗೆ ಚಿಕಿತ್ಸೆ ಸೌಲಭ್ಯ title=
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು.

ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊAಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.

ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತಿçÃಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

ಇದನ್ನೂ ಓದಿ: ಶ್ರೇಷ್ಠ ನಟ ಡಾ ರಾಜ್​ಕುಮಾರ್ ಆದ್ರೆ, ನೆಚ್ಚಿನ ನಟ ಪುನೀತ್ - ಸಿಎಂ ಸಿದ್ದರಾಮಯ್ಯ

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹರೀಶ್, ಯಶಸ್ವಿನಿ ಯೋಜನೆಯ ಕೋ-ಆರ್ಡಿನೇಟರ್ ಮೊ;9739588777 ಗೆ ಸಂಪರ್ಕಿಸಬಹುದಾಗಿದ್ದು, ಫಲಾನುಭವಿಗಳು ಈ ಯೋಜನೆ ಸದುಪಯೋಗ ಪಡಿಸಿಕೊಳ್ಳುಬೇಕೆಂದು ಸಹಕಾರ ಸಂಘಟಗಳ ಉಪನಿಬಂಧಕರಾದ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News