Viral Video: ಮಂಡ್ಯದ ಕಾಮುಕ ಮುಖ್ಯಶಿಕ್ಷಕನಿಗೆ ವಿದ್ಯಾರ್ಥಿನಿಯರು ಥಳಿಸಿದ್ಹೇಗೆ ಗೊತ್ತಾ? ಇಲ್ಲಿದೆ ವೈರಲ್ ವಿಡಿಯೋ
Viral Video: ಕರ್ನಾಟಕದ ಮಂಡ್ಯ ಜಿಲ್ಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕನೋರ್ವ ಕಿರುಕುಳ ನೀಡಿದ ಪ್ರಕರಣ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸಂಚಲನ ಮೂಡಿಸತೊಡಗಿದೆ. ವಿದ್ಯಾರ್ಥಿನಿಯರು ಶಾಲೆಯ ಆರೋಪಿ ಮುಖ್ಯೋಪಾಧ್ಯಾಯರನ್ನು ಪೊರಕೆ ಮತ್ತು ಕೋಲುಗಳಿಂದ ಥಳಿಸಿದ್ದಾರೆ.
Viral Video: ವಿದ್ಯಾರ್ಥಿನಿಯರು ಕಾಮುಕ ಮುಖ್ಯೋಪಾಧ್ಯಾಪಕನಿಗೆ ಧರ್ಮದೇಟು ನೀಡಿದ ಪ್ರಕರಣ ಕರ್ನಾಟಕದ ಮಂಡ್ಯ ಜಿಲ್ಲೆಯಿಂದ ಬೆಳಕಿಗೆ ಬಂದಿದೆ. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ವಿಷಯ ಬೆಳಕಿಗೆ ಬಂದ ನಂತರ ವಿದ್ಯಾರ್ಥಿನಿಯರು ಶಾಲೆಯ ಮುಖ್ಯೋಪಾಧ್ಯಾಪಕನಿಗೆ ಪೊರಕೆ ಮತ್ತು ದೊಣ್ಣೆಗಳಿಂದ ಥಳಿಸಿದ್ದಾರೆ. ಆರೋಪಿಯು ಬಾಲಕಿಯರ ಹಾಸ್ಟೆಲ್‌ನ ಉಸ್ತುವಾರಿಯನ್ನೂ ಸಹ ನೋಡಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿದಿನ ಸಂಜೆ ಹಾಸ್ಟೆಲ್ ಗೆ ಭೇಟಿ ನೀಡುತ್ತಿದ್ದ ಈತ ಬಾಲಕಿಯರನ್ನು ತನ್ನ ಕೋಣೆಗೆ ಕರೆದು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಆರೋಪಿ ಮುಖ್ಯೋಪಾಧ್ಯಾಯರು ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸಲು ಮತ್ತು ಅನುಚಿತವಾಗಿ ಸ್ಪರ್ಶಿಸಲು ಒತ್ತಾಯಿಸುತ್ತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಬಗ್ಗೆ ಏನಾದರೂ ಬಹಿರಂಗ ಪಡಿಸಿದರೆ ವಿದ್ಯಾರ್ಥಿನಿಯರ ವರ್ಗಾವಣೆ ಪ್ರಮಾಣ ಪತ್ರದಲ್ಲಿ ಅವಹೇಳನಕಾರಿ ರಿಮಾರ್ಕ್ ನೀಡುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.
ಇದನ್ನು ತಾವು ವರ್ಷಗಳ ಕಾಲ ಸಹಿಸಿಕೊಂಡಿದ್ದೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದಾರೆ. ಬುಧವಾರ ಸಂಜೆ ಆರೋಪಿ ಮುಖ್ಯೋಪಾಧ್ಯಾಯರು ವಿದ್ಯಾರ್ಥಿನಿಯೊಬ್ಬಳನ್ನು ಹಾಸ್ಟೆಲ್‌ನಲ್ಲಿರುವ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆ ಸಹಾಯಕ್ಕಾಗಿ ಕಿರುಚಿದಾಗ, ಎಲ್ಲಾ ಹುಡುಗಿಯರು ಆಕೆಯ ರಕ್ಷಣೆಗೆ ಧಾವಿಸಿ ಆರೋಪಿಯನ್ನು ಬೆನ್ನಟ್ಟಿದ್ದಾರೆ. ಇದಾದ ಬಳಿಕ ಪೊರಕೆ ಮತ್ತು ಕೋಲುಗಳಿಂದ ಆತನನ್ನು ಥಳಿಸಿದ್ದಾರೆ.
ಇದನ್ನೂ ಓದಿ-Viral Video: ಕುಸ್ತಿ ಅಖಾಡ ಆಗಿ ಮಾರ್ಪಟ್ಟ ಮದುವೆಯ ವೇದಿಕೆ, ಭಾರಿ ಮಾರಾಮಾರಿಗಿಳಿದ ಜೋಡಿ!
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಹುಡುಗಿಯರು ದೊಣ್ಣೆ ಮತ್ತು ಕೋಲುಗಳಿಂದ ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವುದು ಕಂಡು ಬರುತ್ತಿದೆ. ಮುಖ್ಯೋಪಾಧ್ಯಾಯರು ನಿತ್ಯ ಕ್ರಿಮಿನಲ್ ಆಗಿದ್ದು, ಈಗಾಗಲೇ ಹಲವು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲು ಶಿಕ್ಷಕನನ್ನು ಥಳಿಸಿದ ವಿದ್ಯಾರ್ಥಿನಿಯರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಲಾಟೆ ನಂತರ ಕೆಆರ್‌ಎಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಮುಖ್ಯಶಿಕ್ಷಕನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ-CPR Viral Video: ನಡುರಸ್ತೆಯಲ್ಲಿಯೇ ಸಂಭವಿಸಿದ ಹೃದಯಾಘಾತ, CPR ನೀಡಿ ಪ್ರಾಣ ರಕ್ಷಿಸಿದ ಲೇಡಿ ಪೋಲಿಸ್
ಗ್ರಾಮಸ್ಥರು ಕೂಡ ಹಾಸ್ಟೆಲ್ ಬಳಿ ಜಮಾಯಿಸಿ ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಬಾಲಕಿಯರ ಹಾಸ್ಟೆಲ್ ವಾರ್ಡನ್ ದೂರಿನ ಮೇರೆಗೆ ಆತನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿ ಮುಖ್ಯೋಪಾಧ್ಯಾಯನ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.